Khaki clothes are my mother; ASP Narayan Baramani

ಖಾಕಿ ಬಟ್ಟೆ ನನ್ನ ತಾಯಿ; ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಬರಮನಿ

ಧಾರವಾಡ: ಕಳೆದ 33 ವರ್ಷಗಳಿಂದ ಖಾಕಿ ಬಟ್ಟೆ ನನ್ನ ದೇವರು, ತಾಯಿಯಂತೆ ಗೌರವಿಸಿ, ಬದುಕಿದ್ದೇನೆ. ಯುವ ಅಧಿಕಾರಿಗಳು ವೃತ್ತಿಯ ಘನತೆ, ಗೌರವ ಎತ್ತಿ ಹಿಡಿಯುವಂತೆ ಸದಾ ಕಾಲ ಹೆಮ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಎಸ್ ಪಿ. ನಾರಾಯಣ ಬರಮನಿ (Narayana Baramani) ಅವರು ಹೇಳಿದರು.

ಅವರು ಇಂದು ಸಂಜೆ ಎಸ್.ಪಿ.ಕಚೇರಿ ಸಭಾಭವನದಲ್ಲಿ ಧಾರವಾಡ ಜಿಲ್ಲಾ ಪೋಲಿಸ್ ಇಲಾಖೆಯಿಂದ ಬೆಳಗಾವಿ ಪೊಲೀಸ ಅಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲಿಸ್ ಆಯುಕ್ತ ಹುದ್ದೆಗೆ ವರ್ಗಾವಣೆ ಅಗಿರುವ ನಿಮಿತ್ತ ಆಯೋಜಿಸಿದ್ದ ಬಿಳ್ಕೋಡುಗೆ ಸಮಾರಂಭದಲ್ಲಿ ಗೌರವ, ಸನ್ಮಾನ ಸ್ವೀಕರಿಸಿ, ಮಾತನಾಡಿದರು.

ನಾವು ಕೆಲಸ ಮಾಡುವ ಇಲಾಖೆ, ಹುದ್ದೆಯ ಬಗ್ಗೆ ಯಾವಾಗಲೂ ನಿಷ್ಠೆ, ಹೆಮ್ಮೆ, ಅಭಿಮಾನ ಇರಬೇಕು. ಪೊಲೀಸ್ ಇಲಾಖೆಯ ಧ್ಯೇಯವಾದ ದುಷ್ಟರಿಗೆ ಶಿಕ್ಷೆ; ಶಿಷ್ಟರಿಗೆ ರಕ್ಷೆ ತರಹ ನಮ್ಮ ವೃತ್ತಿ ಬದುಕು ಇರಬೇಕು ಎಂದರು.

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವಾಗ ನಿಷ್ಠುರತೆ ಇರಬೇಕು. ಕಾನೂನು ಪ್ರಕಾರ ಆಗುವುದನ್ನು ಮಾಡಲು ಆಗುತ್ತದೆ, ಇಲ್ಲದ್ದನ್ನು ಇಲ್ಲವೆಂದು ನೇರವಾಗಿ ಹೇಳುವ ಸಾಮರ್ಥ್ಯ, ಗುಣ ಬೆಳೆಸಿಕೊಳ್ಳಬೇಕು. ಸಮಾಜವನ್ನು ಸರಿದಾರಿಗೆ ತರುವ ಕೆಲಸ ನಮ್ಮಿಂದ ಆಗಬೇಕು. ನಮ್ಮತನವನ್ನು ಎಂದು ಕಳೆದುಕೊಳ್ಳಬಾರದು ಎಂದು ಅವರು ಹೇಳಿದರು.

ಧಾರವಾಡದಿಂದ ನಿಮ್ಮೆಲ್ಲರ ಪ್ರೀತಿ, ವಿಶ್ವಾಸದ ಮೂಟೆ ಹೊತ್ತು ಹೊರಟಿದ್ದೇನೆ. ಧಾರವಾಡ ಜಿಲ್ಲೆ ಶಾಂತ, ಸುಂದರವಾಗಿದೆ. ಸಂಸ್ಕಾರ, ಸಂಸ್ಕೃತಿ ಇನ್ನೂ ಉಳಿದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಅರ್ಯ ಅವರು ಮಾತನಾಡಿ, ನೂರು ಪುಸ್ತಕ ಹೇಳುವ ಸಾರವನ್ನು ಒಬ್ಬ ಹಿರಿಯ ಅಧಿಕಾರಿಯ ಅನುಭವದ ಮಾತುಗಳು ಹೇಳುತ್ತವೆ. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ನಮ್ಮ ಪೊಲೀಸ ಇಲಾಖೆಯ ಹೆಮ್ಮೆಯ ಪುತ್ರ. ಅವರ ಸೇವೆ, ನಡುವಳಿಕೆ, ಕರ್ತವ್ಯ ನಿಷ್ಠೆ ಮತ್ತು ಕರ್ತವ್ಯ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ ಎಂದರು.

ನಾರಾಯಣ ಬರಮನಿ ಅವರು ನಮ್ಮ ಇಲಾಖೆಯ ಐಕೋನ್. ಅವರ ಸುದೀರ್ಘ ಸೇವೆ, ಇಲಾಖೆಯ ಅಧಿಕಾರಿಗಳಿಗೆ ಸ್ಪೂರ್ತಿ, ಹೆಮ್ಮೆ ಮೂಡಿಸಿದೆ ಎದು ಎಸ್ಪಿ ಗುಂಜನ ಆರ್ಯ ಅವರು ಹೇಳಿದರು.

ವೇದಿಕೆಯಲ್ಲಿ ಡಿವೈಎಸ್ ಪಿ ವಿನೋದ ಮುಕ್ತೆದಾರ, ನಾರಾಯಣ ಬರಮನಿ ಅವರ ಧರ್ಮಪತ್ನಿ ಕಸ್ತೂರಿ ಬರಮನಿ, ಸೈಬರ್ ಪೊಲೀಸ್ ಠಾಣೆ ಡಿವೈಎಸ್.ಪಿ. ಶಿವಾನಂದ ಕಟಗಿ, ಡಿಎಸ್ಪಿ ಡಿಎಆರ್ ದೂಳಪ್ಪ ಧನಗರ ಇದ್ದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇನಸ್ಪೇಕ್ಟರ್ ಗಳಾದ ಮುರಗೇಶ ಚಣ್ಣನ್ನನವರ, ರವಿ ಕಪ್ಪತ್ತನವರ, ಸಹಾಯಕ ಅಡಳಿತ ಅಧಿಕಾರಿ ಮಹಾಂತೇಶ ಎಸ್.ಹಿರೇಮಠ, ಸೋಕೊ ಅಧಿಕಾರಿ ಸಂಜೀವ ಪಾಟೀಲ ಮತ್ತು ಇತರರು ಮಾತನಾಡಿದರು

ಪಿಐ ಮಹಾಂತೇಶ ನಿರೂಪಿಸಿದರು. ಡಿವೈಎಸ್.ಪಿ ಶಿವಾನಂದ ಕಟಗಿ ವಂದಿಸಿದರು.

ಕಾರ್ಯಕ್ರಮದಲ್ಲಿ ದಾರವಾಡ ಗ್ರಾಮೀಣ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!