Applications invited for

ಹೋಂಸ್ಟೇ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ (Homestay) ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ.

ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ.

ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.

ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.

ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!