ದೊಡ್ಡಬಳ್ಳಾಪುರ: ಗ್ರಾಮಪಂಚಾಯಿತಿ ಅಧ್ಯಕ್ಷ (President) ಸ್ಥಾನಕ್ಕೆ ರಾಜೀನಾಮೆ (Resignation) ನೀಡುವ ವಿಚಾರವಾಗಿ ಅಧ್ಯಕ್ಷನ ಮೇಲೆ ಸದಸ್ಯರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ದೊಡ್ಡಬಳ್ಳಾಪುರ ನಗರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ವಿವರ: ನೆಲಮಂಗಲ ತಾಲೂಕಿನ ಅರೆ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ಎನ್ನುವವರು, ಸದಸ್ಯರು ಮೇಲೆ ಹಲ್ಲೆ ನಡೆಸಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಸೋಮವಾರ 12:30 ಗಂಟೆ ಸಮಯದಲ್ಲಿ ನೆಲಮಂಗಲ ತಾಲೂಕು ಅರೆ ಬೊಮ್ಮನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ರವರ ಮೇಲೆ ಅದೇ ಗ್ರಾಮ ಪಂಚಾಯತಿಯ ಸದಸ್ಯರು ಎನ್ನಲಾದ ಶೈಲೇಂದ್ರ ಮುಂತಾದ ಎಂಟು ಜನ ಸದಸ್ಯರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಒತ್ತಾಯಿ,ಸಿ ದೊಡ್ಡಬಳ್ಳಾಪುರ ತಾಲೂಕು ಉಪ ವಿಭಾಗಾಧಿಕಾರಿಗಳ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ.
ಈ ವೇಳೆ ರಂಗಸ್ವಾಮಿ ರಾಜೀನಾಮೆ ನೀಡಲು ಒಪ್ಪದಿದ್ದಾಗ ತಳ್ಳಾಟ, ನೂಕಾಟ ನಡೆದು ರಂಗಸ್ವಾಮಿ ಅವರ ಶರಟು ಹರಿದು ಹೋಗಿದೆ.
ಈ ಕುರಿತಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಸ್ತುತ ರಂಗಸ್ವಾಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.