Don't spread misinformation about the Manjunatha Swamy temple in Dharmasthala: R. Ashoka

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು: ಧರ್ಮಸ್ಥಳದ (Dharmasthala) ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.

ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ.

ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.

ಸಾವಿರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ.

ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.

ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ

ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ.

ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ.

ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!