ಗೌರಿಬಿದನೂರು: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಹದಿನೈದು ಕುಟುಂಬಗಳು ತಾಲ್ಲೂಕಿನ ವಿದುರಾಶ್ವತ್ಥದಲ್ಲಿ ನಡೆದ ಘರ್ ವಾಪಸಿ (Ghar vapasi) ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ.
ರವಿ ನಾರಾಯಣ ರೆಡ್ಡಿ ಅವರ ನೇತೃತ್ವದಲ್ಲಿ ವಿದುರಾಶ್ವತ್ಥದಲ್ಲಿ ನಡೆದ ಘರ್ ವಾಪಸಿ ಕಾರ್ಯಕ್ರಮದಲ್ಲಿ ಹಿಂದೂ ಸಂಪ್ರದಾಯದಂತೆ, ಶಾಸ್ರೋಕ್ತವಾಗಿ ಮರಳಿ ಹಿಂದೂ ಧರ್ಮಕ್ಕೆ ಸೇರಿಕೊಂಡಿದ್ದಾರೆ.
ಗೌರಿಬಿದನೂರು ತಾಲೂಕಿನ ನಾಗಸಂದ್ರ, ಗಾಂಧಿನಗರ, ಕದಿರೇನಹಳ್ಳಿ ಹಾಗೂ ನೆರೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ಹಲವು ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಹದಿನೈದು ಕುಟುಂಬಗಳನ್ನು ಮರಳಿ ಹಿಂದೂ ಧರ್ಮಕ್ಕೆ ವಾಪಸ್ ಕರೆ ತರಲಾಯಿತು.