ಬೆಂ.ಗ್ರಾ.ಜಿಲ್ಲೆ: 2025 26ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದ ಎಣ್ಣೆ ಕಾಳು ಯೋಜನೆಯಡಿ ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).
ಎಣ್ಣೆ ಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣ ಖರೀದಿಸಲು ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು ವಿಸ್ತ್ರತ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬಹುದು ಯೋಜನಾ ವರದಿಯ ಶೇ.33ರಷ್ಟು ಅಥವಾ 9.99 ಲಕ್ಷ ರೂ.ಮೀರದಂತೆ ಸಹಾಯಧನ ಒದಗಿಸಲಾಗುತ್ತದೆ. ಈ ಘಟಕದಲ್ಲಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆ ಪರಿಗಣಿಸಲಾಗುವುದಿಲ್ಲ.
ಆಸಕ್ತರು ಅರ್ಜಿಯನ್ನು ಸಹಾಯಕ ಕೃಷಿ ನಿರ್ದೇಶಕರು ನೆಲಮಂಗಲ ಹಾಗೂ ಸಹಾಯಕ ಕೃಷಿ ನಿರ್ದೇಶಕರು ದೊಡ್ಡಬಳ್ಳಾಪುರ ಕೃಷಿ ಇಲಾಖೆಯಲ್ಲಿ ಪಡೆದು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಕಲಾವತಿ ಬಿ ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.