Are BJP members pure? Why is no ED case registered against them?: DCM D.K. Shivakumar

ಬಿಜೆಪಿಯವರು ಶುದ್ಧರೇ..? ಅವರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ?: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: “ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar ಅವರು ತಿಳಿಸಿದರು.

ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಮೂಡಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಡಿಗೆ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಕೇಳಿದಾಗ, “ನನ್ನ ಪ್ರಕರಣವನ್ನೇ ತೆಗೆದುಕೊಳ್ಳಿ. ನನ್ನ ಮೇಲೆ ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ನಂತರ ಆ ಕೇಸ್ ರದ್ದಾಯಿತು. ರಾಜಕೀಯ ಒತ್ತಡಕ್ಕೆ ಸಿಲುಕುವ ಬಗ್ಗೆ ಇಡಿ ಪರಿಶೀಲನೆ ನಡೆಸಬೇಕು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇರಲಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿರಬೇಕು” ಎಂದರು.

ಕೇಂದ್ರ ಸರ್ಕಾರ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಿದಾಗ, “ಈ ಕಾರಣಕ್ಕೆ ಈ ರೀತಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ಬಿಜೆಪಿ ನಾಯಕರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ? ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಯಾಕೆ ಕೇಸ್ ಹಾಕಲಾಗುತ್ತಿದೆ. ಬಿಜೆಪಿಗೆ ಹೋದವರೆಲ್ಲಾ ಶುದ್ಧರೇ? ಇದೇ ಅಲ್ಲವೇ ಬಿಜೆಪಿ ವಾಷಿಂಗ್ ಮಷಿನ್” ಎಂದು ತಿಳಿಸಿದರು.

ಟನಲ್ ಕಾರಿಡಾರ್ ಅಗತ್ಯವಿದೆಯೇ ಎಂಬ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ಪಾಪ ಸಣ್ಣ ಹುಡುಗ, ಅವರ ಪಕ್ಷದಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರಲ್ಲಾ ಅವರ ಮೂಲಕ ಸದನದಲ್ಲಿ ಚರ್ಚೆ ಮಾಡಿಸಲಿ” ಎಂದು ತಿರುಗೇಟು ನೀಡಿದರು.

ನಾನು ಬಂದಮೇಲೆ ಯಾಕೆ ಹೋರಾಟ?

ಬಿಡದಿ ಟೌನ್ ಶಿಪ್ ಗೆ ಕೆಲವು ಪಂಚಾಯ್ತಿ ರೈತರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಈ ಯೋಜನೆ ನಾನು ಮಾಡಿದ್ದಲ್ಲ. ಕುಮಾರಸ್ವಾಮಿ ಅವರು ಮಾಡಿರುವುದು. ಅದನ್ನು ನಾನು ಡಿನೋಟಿಫಿಕೇಷನ್ ಮಾಡಲು ಬರಲ್ಲ. ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ. ಅವತ್ತಿನಿಂದ ಹೋರಾಟ ಮಾಡದೇ, ನಾನು ಬಂದಾಗ ಮಾತ್ರ ಯಾಕೆ ಹೋರಾಟ ಮಾಡಬೇಕು? 9 ಸಾವಿರ ಎಕರೆ ಪೈಕಿ 1 ಸಾವಿರಕ್ಕೂ ಹೆಚ್ಚು ಜಮೀನು ಈಗಾಗಲೇ ಕೆಐಎಡಿಬಿಗೆ ನೀಡಲಾಗಿದೆ. ಅದಕ್ಕೆ ಪರಿಹಾರವನ್ನು ಪಡೆಯಲಾಗಿದೆ. ಆಗ ಹೋರಾಟ ಮಾಡದೆ ಈಗ ಯಾಕೆ? ಇದರಲ್ಲೂ 75% ಜನ ತಮಗೆ ಏನು ಪರಿಹಾರ ಬೇಕು ಎಂದು ಕೇಳಿದ್ದಾರೆ” ಎಂದು ತಿಳಿಸಿದರು.

ರೈತರನ್ನು ಕರೆದು ಚರ್ಚೆ ಮಾಡುತ್ತಿಲ್ಲ ಎಂದು ಕೇಳಿದಾಗ, “ರೈತರ ಜೊತೆ ಚರ್ಚೆ ಮಾಡುತ್ತೇನೆ. ಅವರನ್ನು ಕರೆಯುವುದಿಲ್ಲ. ನಾನೇ ಅವರ ಬಳಿ ಹೋಗಿ ಚರ್ಚೆ ಮಾಡುವೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಕೂಡ ನಮ್ಮ ರೈತರೆ” ಎಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಸಮಸ್ಯೆ ಏನು ಇಲ್ಲ. ನಮ್ಮ ಕಾರ್ಯಕರ್ತರು, ಸ್ಥಳೀಯ ನಾಯಕರು ಇಲ್ಲಿ ಜನರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂದು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ನೀಡುತ್ತೇವೆ. ಕೆಲವು ಅರ್ಜಿಗಳು ಪಿಂಚಣಿ, ಇ-ಖಾತಾ, ಜಿಎಸ್ ಟಿ ವಿಚಾರವಾಗಿ ಬಂದಿವೆ” ಎಂದು ತಿಳಿಸಿದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!