Extension of Puneeth Rajkumar Hridajyoti Yojana to all taluk hospitals: Dinesh Gundu Rao

ಗುಡ್ಮಾರ್ನಿಂಗ್ ನ್ಯೂಸ್: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಪುನೀತ್ ರಾಜ್‍ಕುಮಾರ್ ಹೃದಯಜ್ಯೋತಿ ಯೋಜನೆ ವಿಸ್ತರಣೆ

ಧಾರವಾಡ: ರಾಜ್ಯದಲ್ಲಿ ಹೃದಯ ಖಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಿಲ್ಲ. ಆರೋಗ್ಯ ಇಲಾಖೆಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪುನೀತ್ ರಾಜ್‍ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.

ಅವರು ನಿನ್ನೆ ಸಂಜೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ರಾಜ್ಯದ ಒಂಬತ್ತು ತಾಲೂಕು ಸ್ಥಾನದಲ್ಲಿರುವ 10 ಹಾಸಿಗೆಯ ಆಸ್ಪತ್ರೆಗಳನ್ನು 30 ಹಾಸಿಗೆಯ ಆಸ್ಪತ್ರೆಗಳನ್ನಾಗಿ ಉನ್ನತ್ತೀಕರಿಸಿ, ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮಕೈಗೊಂಡಿದೆ. ಅದರಲ್ಲಿ ಧಾರವಾಡ ಜಿಲ್ಲೆಯ ಅಳ್ನಾವರ ಮತ್ತು ಅಣ್ಣಿಗೇರಿ ಆಸ್ಪತ್ರೆಗಳು ಸೇರಿದ್ದು, ಬರುವ ನವೆಂಬರದಿಂದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

ಆರೋಗ್ಯ ಇಲಾಖೆಯು ಯಾವುದೇ ವ್ಯಕ್ತಿಗಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡದೇ, ಸಮುದಾಯದ ಆರೋಗ್ಯಕ್ಕಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಪ್ರಥಮ ಬಾರಿಗೆ ಇಲಾಖೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ವೈದ್ಯ, ಸಿಬ್ಬಂದಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಎಲ್ಲರೂ ಸ್ಪಂದಿಸಿ, ಸಾರ್ವಜನಿಕ ಹಿತದೃಷ್ಠಿಯಿಂದ ಉತ್ತಮ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ಧಾರವಾಡ ಸಿವಿಲ್ ಆಸ್ಪತ್ರೆಯನ್ನು ಬೇರೆಡೆ ಸ್ಥಾಳಾಂತರಿಸುವ ವಿಚಾರ ಸಧ್ಯಕ್ಕೆ ಇಲ್ಲ. ಈಗಾಗಲೇ ಆಸ್ಪತ್ರೆಯ ಅಗತ್ಯ ಉಪಕರಣ ಮತ್ತು ದುರಸ್ತಿಗಾಗಿ ಅನುದಾನ ನೀಡಲಾಗಿದೆ. ಹೃದಯಾಘಾತದಲ್ಲಿ ಯಾವುದೇ ರೀತಿ ಬದಲಾವಣೆ ಆಗಿರುವುದಿಲ್ಲ. ಮೊದಲು ಹೇಗೆ ಇತ್ತೋ ಹಾಗೆ ಈಗಲೂ ಸಹ ಇದೆ.

ಹೃದಯಾಘಾತಕ್ಕೆ ಹಲವಾರು ಕಾರಣಗಳು ಇವೆ. ನಮ್ಮ ಜೀವನ ಶೈಲಿ, ಆಹಾರ ಪದ್ಧತಿ, ಒತ್ತಡದ ಜೀವನ. ಆದ್ದರಿಂದ ಹೆಚ್ಚು ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. 40 ರಿಂದ 50 ವರ್ಷದ ವಯಸ್ಕರು ಕನಿಷ್ಠ ಎರಡು ವರ್ಷಕ್ಕೆ ಒಂದು ಸಾರಿಯಾದರೂ ಇಸಿಜಿ, ರಕ್ತದೊತ್ತಡ ಪರೀಕ್ಷೆ ಮಾಡಿಸಬೇಕು. ಅದರಲ್ಲಿ ಏನಾದರೂ ತೊಂದರೆ ಕಂಡು ಬಂದರೆ, ಸುಲಭವಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.

ಆರೋಗ್ಯ ಇಲಾಖೆಯಿಂದ ಹೊಸದಾಗಿ ಬಂದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿತ್ತಿದೆ. ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿಯ ಆಗು ಹೋಗುಗಳ ಬಗ್ಗೆ ತಿಳಿದು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಜೂನ್ ಅಲ್ಲಿ ಬಿಡುಗಡೆಯಾದ ಗೃಹ ಆರೋಗ್ಯ ಎಂಬ ಯೋಜನೆಯು ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಚಾಲನೆ ನೀಡಲಾಗಿದೆ. ಇದು ನಮಗೆ ಮಹತ್ವಾಕಾಂಕ್ಷೆಯ ಯೋಚನೆಯಾಗಿತ್ತು. ಅದರ ಮಾಹಿತಿ ತಿಳಿದು ಇನ್ನು ಹೆಚ್ಚಾಗಿ ಬೇರೆ ಸುಧಾರಣೆ ತರಲಾಗುತ್ತದೆ ಎಂದು ಹೇಳಿದರು.

ಈ ವರ್ಷದಲ್ಲಿ ಸುತ್ತೋಲೆಯನ್ನು ಹೊರಡಿಸಿ, ಎಂಬಿಬಿಎಸ್ ವೈದ್ಯರ 2 ಸಾವಿರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಮತ್ತು ತಜ್ಞ ವೈದ್ಯರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗುತ್ತದೆ ಎಂದು ಅವರು ಹೇಳಿದರು.

ಮುಂದಿನ ತಿಂಗಳು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಕರ್ನಾಟಕ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ. ಈಶ್ವರ ಹೊಸಮನಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕ ಡಾ. ಅವಿನಾಶ ಮೆನನ್ ರಾಜೇಂದ್ರನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಕೆ.ವಸಂತಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಇದ್ದರು.

ಬೆಳಗಾವಿ ವಿಭಾಗೀಯ ಸಹನಿರ್ದೇಶಕರಾದ ಡಾ. ಪುಷ್ಪ ಎಚ್.ಆರ್. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಡಿಎಚ್‍ಓ ಡಾ. ಎಸ್.ಎಮ್. ಹೊನಕೇರಿ ವಂದಿಸಿದರು.

ಸಭೆಯಲ್ಲಿ ಬೆಳಗಾವಿ ವಿಭಾಗದ ಎಲ್ಲ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಕೆ.ಎಂ.ಸಿ.ಆರ್.ಐ ತಜ್ಞ ವೈದ್ಯರು ಭಾಗವಹಿಸಿದ್ದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!