GST for small traders; Here are the key highlights of the meeting led by the CM

ಸಣ್ಣ ವ್ಯಾಪಾರಿಗಳಿಗೆ GST ಬರೆ; ಸಿಎಂ ನೇತೃತ್ವದ ಸಭೆಯ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ

ಬೆಂಗಳೂರು: ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ (GST) ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಲಾಯಿತು.

ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮುಖ್ಯಮಂತ್ರಿಗಳು ನೀಡಿದ ವಿವರಗಳ ಮುಖ್ಯಾಂಶಗಳು ಈ ರೀತಿಯಾಗಿದೆ.

ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ.

ʻಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆʼ.

ʻಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ʻಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕುʼ.

ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ಯುಪಿಐ ಅಡಿ ರೂ. 40ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.

ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು.

ವ್ಯಾಪಾರ ವಹಿವಾಟು ಬಂದ್ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದರು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!