ದೊಡ್ಡಬಳ್ಳಾಪುರ: ಬೆಂಗಳೂರು ಹಾಲು ಒಕ್ಕೂಟ (ಬಮೂಲ್)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ಡಿ.ಕೆ. ಸುರೇಶ್ (D.K. Suresh) ಅವರು ನಾಳೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿಲಿದ್ದಾರೆ.
ಈ ಕುರಿತಂತೆ ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ (B.C. Ananad Kumar) ಅವರು ಹರಿತಲೇಖನಿಗೆ ಮಾಹಿತಿ ನೀಡಿದ್ದಾರೆ.
ಜುಲೈ.25ರಂದು ಬೆಳಗ್ಗೆ 10 ಗಂಟೆ ದೊಡ್ಡಬಳ್ಳಾಪುರ ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ನಡೆಯುವ ದೊಡ್ಡಬಳ್ಳಾಪುರ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರ ಸಮಾಲೋಚನಾ ಸಭೆಯಲ್ಲಿ ಡಿ.ಕೆ. ಸುರೇಶ್ ಅವರು ಭಾಗವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಎಂಪಿಸಿಎಸ್ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರು ನಾಳೆ ನಡೆಯುವ ಸಮಾಲೋಚಮಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿ.ಸಿ. ಆನಂದ್ ಕುಮಾರ್ ಅವರು ಮನವಿ ಮಾಡಿದ್ದಾರೆ.