Caste survey to create a gap between castes: R. Ashoka

ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಆರ್.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Cmsiddaramaiah) ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R.Ashoka) ಟೀಕಿಸಿದರು.

ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ.

ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದರು‌.

ಕಾಂಗ್ರೆಸ್ ಸರ್ಕಾರ ಮರಳಿ ಜಾತಿ ಗಣತಿ ಮಾಡಲಿದೆ ಎಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ. ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ಸಾಕು ಎಂದರು.

ರಾಜ್ಯ ಸರ್ಕಾರ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು. ಆದರೆ ಇದೇ ಸರ್ಕಾರದ ಪಕ್ಷದ ನಾಯಕರು ಸಂಸತ್ತಿನಲ್ಲಿ ಎಲ್ಲದಕ್ಕೂ ಸಭಾತ್ಯಾಗ ಮಾಡುತ್ತಾರೆ‌. ಸಂಸತ್ತಿನಲ್ಲಿ ರಾಜ್ಯದ ವಿಷಯವನ್ನು ಚರ್ಚೆ ಮಾಡಬೇಕು. ನಮ್ಮ ಪಕ್ಷದ ಎಲ್ಲ ಸಂಸದರು ರಾಜ್ಯದ ನೆಲ, ಜಲ ವಿಚಾರವಾಗಿ ಮಾತಾಡುತ್ತಾರೆ ಎಂದರು.

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿರುವುದು ಸ್ವಾಗತಾರ್ಹ. ಶಾಸಕರ ಮನೆ ಸುಟ್ಟಿರುವ ಘಟನೆ ಇನ್ನೂ ಕಣ್ಣ ಮುಂದಿದೆ. ಪಿಎಫ್ ಐ ಸೇರಿದಂತೆ ಪಾಕಿಸ್ತಾನದ ಪರವಾಗಿರುವವರು ಅನೇಕರು ಇದರಲ್ಲಿ ಭಾಗಿಯಾಗಿದ್ದರು. ಅವರೆಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದ್ದೆ. ಈಗ ಕೂಡ ಸರ್ಕಾರ ಅವರ ಅಹವಾಲು ಆಲಿಸಬೇಕು. ನಾನು ಕೂಡ ಅದಕ್ಕೆ ಸ್ಪಂದಿಸುತ್ತೇನೆ‌. ಆಂಧ್ರಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿರುವುದು ಖಂಡನೀಯ. ಇಲ್ಲಿನ ಸರ್ಕಾರ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ‌ ನೀಡುವಂತೆ ಸಲಹೆ, ಸೂಚನೆ ಕೊಡಬೇಕು ಎಂದರು.

ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ. ಇದರ ತನಿಖೆಯಾಗಿ ಸತ್ಯ ಹೊರಬರಲಿ. ಇದರಲ್ಲಿ ಜನರಿಗೆ ನ್ಯಾಯ ಸಿಗಲು ಹೋರಾಟ ಮಾಡುತ್ತೇವೆ ಎಂದರು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!