ಬೆಂಗಳೂರು: ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದರು.
ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ ಈ ಕುರಿತು ಮಾಹಿತಿ ನೀಡಿದರು.
ಪ್ರಮುಖ ಆನೆಗಳು: ಅಭಿಮನ್ಯು, ಭೀಮ, ಕಂಜನ್, ಧನಂಜಯ, ಪ್ರಶಾಂತ್, ಮಹೇಂದ್ರ, ಏಕಲವ್ಯ.
ಹೆಣ್ಣು ಆನೆಗಳು: ಕಾವೇರಿ, ಲಕ್ಷ್ಮೀ.
ಆ.4 ರಂದು ಗಜಪಯಣಕ್ಕೆ ಚಾಲನೆ!
— Eshwar Khandre (@eshwar_khandre) July 24, 2025
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಮತ್ತೆ ಅಂಬಾರಿ ಹೊರುತ್ತಿದ್ದು, ಆಗಸ್ಟ್ 4ರಂದು ವೀರನಹೊಸಳ್ಳಿಯಿಂದ ಗಜಪಯಣಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಗುತ್ತದೆ.
ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ 14 ಆನೆಗಳ ಪೈಕಿ ಮೊದಲ ಹಂತದಲ್ಲಿ ಆಯ್ಕೆಯಾದ 9 ಆನೆಗಳ ಪಟ್ಟಿಯನ್ನು ಇಂದು ಬಿಡುಗಡೆ… pic.twitter.com/Y7FJMtqZqt
ಇನ್ನೂ 5 ಆನೆಗಳನ್ನು ಎರಡನೇ ಹಂತದಲ್ಲಿ ಕಾಡಿನಿಂದ ಮೈಸೂರಿಗೆ ತರಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.