If he becomes an MLA in 2028, I will never set foot in Bhadravati in my lifetime: Nikhil Kumaraswamy

2028ಕ್ಕೆ ಅವರೇ ಶಾಸಕರಾದ್ರೆ ನನ್ನ ಜೀವನದಲ್ಲಿ ಭದ್ರಾವತಿಗೆ ಕಾಲಿಡೋದಿಲ್ಲ: ನಿಖಿಲ್ ಕುಮಾರಸ್ವಾಮಿ ಸವಾಲ್

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ರಾಕ್ಷಸರ ಕೈಗೆ ಹೋಗಿ ಸಿಲುಕಿದೆ. ದಯವಿಟ್ಟು ಇದನ್ನ ರಾಮ ರಾಜ್ಯ ಕ್ಷೇತ್ರವನ್ನಾಗಿ ಮಾಡಬೇಕು, ಆ ಪರಿವರ್ತನೆ ಮಾಡುವ ಶಕ್ತಿ ಕ್ಷೇತ್ರದ ಮಹಾಜನತೆಗೆ ಇದೆ ಎಂದು ಶಾಸಕ ಬಿ.ಕೆ ಸಂಗಮೇಶ್ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದರು.

ಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭದ್ರಾವತಿ ಶಾಸಕರ ಬಿ.ಕೆ ಸಂಗಮೇಶ್ ಅವರನ್ನ ತರಾಟೆಗೆ ತೆಗೆದುಕೊಂಡರು.

Mr. ಶಾಸಕರೇ ಇವತ್ತಿನ ದಿನಾಂಕ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನೀವೇನಾದ್ರು ಶಾಸಕರಾದ್ರೆ ಭದ್ರಾವತಿಗೆ ನನ್ನ ಜೀವನದಲ್ಲಿ ಕಾಲಿಡೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಭದ್ರಾವತಿ ತಾಲ್ಲೂಕಿನಲ್ಲಿ ಆಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ. ಅಹಂಕಾರ ಇವೆಲ್ಲಾವನ್ನ ಮೆಟ್ಟಿ ನಿಲ್ಲುವಂತ ಶಕ್ತಿ ಕ್ಷೇತ್ರದ ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ಕೊಟ್ಟಿದ್ದಾನೆ ಅಪ್ಪಾಜಿ ಗೌಡರು ಅದನ್ನ ಎಲ್ಲರ ರಕ್ತದ ಕಣ ಕಣದಲ್ಲೂ ರೂಡಿಸಿದ್ದಾರೆ ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಪಾರದರ್ಶಕ ವಾಗಿ ಕೆಲಸವನ್ನ ಮಾಡುವುದಕ್ಕೆ ಕೈಯನ್ನ ಕಟ್ಟಿಹಾಕಿ
ಕ್ಷೇತ್ರದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್, ಮಟ್ಕಾ ಇಂತಃಹ ದಂಧೆಗಳಿಗೆ ಯುವ ಸಮುದಾಯವನ್ನ ಅವರ ರಾಜಕಾರಣದ ಬೆಳೆ ಬೇಯಿಸಿಕೊಳ್ಳಲು ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಶಾಸಕ ಬಿ.ಕೆ ಸಂಗಮೇಶ್ ವಿರುದ್ದ ವಾಗ್ದಾಳಿ ನಡೆಸಿದರು.

ಕ್ಷೇತ್ರದಲ್ಲಿ ಅಪ್ಪಾಜಿಗೌಡರನ್ನ ಅನೇಕ ಬಾರಿ ಶಾಸಕರನ್ನಾಗಿ ಮಾಡಿದ್ದೀರಿ. ಕ್ಷೇತ್ರದಲ್ಲಿ ಒಬ್ಬ ಹೆಣ್ಣು ಮಗಳಿಗೆ ನೀವು ಧಮ್ಕಿ ಹಾಕಿದ್ರೆ ಮನೆಗೆ ಹೋಗಿ ಸೇರ್ಕೊಳ್ತಾರೆ ಅಂತ ನಿಮ್ಮ ಮನಸ್ಸಿನಲ್ಲಿ ಇದ್ರೆ ಅದು ನಿಮ್ಮ ಕನಸು, ಶಾರದಾ ಅಪ್ಪಾಜಿಗೌಡರ ಜೊತೆ ದೇವೇಗೌಡರು, ಕುಮಾರಣ್ಣ, ನಿಖಿಲ್ ಕುಮಾರಸ್ವಾಮಿ, ಇದಕ್ಕಿಂತ ಮಿಗಿಲಾಗಿ ಕ್ಷೇತ್ರದ ಜನತೆ ಇದ್ದಾರೆ ಎಂದು ತಿಳಿಸಿದರು.

ಜನತಾ ದಳ ಪಕ್ಷದ ಕಾರ್ಯಕರ್ತರು ಎದುರಿ ಹೋಗುವಂತ ಸಂಸ್ಕೃತಿ ನಮ್ಮದಲ್ಲ, ಕಾಂಗ್ರೆಸ್ ಪಕ್ಷ ಕಳೆದ ಎರಡು ವರ್ಷಗಳ ಆಡಳಿತದಲ್ಲಿ ಸ್ವತಂತ್ರ್ಯವಾಗಿ, ಪಾರದರ್ಶಕವಾಗಿ ಕೆಲಸ ಮಾಡುವಂತಹ ಸಂಸ್ಥೆಗಳನ್ನು ಕೈ ಕಟ್ಟಾಗಿ, ನಿಮಗೆ ಬೇಕಾದಂತಹ ರೀತಿಯಲ್ಲಿ ಬಳಕೆ ಮಾಡಿಕೊಂಡಿರುವ ಸಾಕಷ್ಟು ನಿದರ್ಶನ ನಮ್ಮ ಕಣ್ಮುಂದೆ ಇದೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

ಕುಮಾರಣ್ಣ ನಾಲ್ಕು ಬಾರಿ ರಾಮನಗರದಲ್ಲಿ ಶಾಸಕರಾಗಿದ್ದರು. ಜಿಲ್ಲೆಯಲ್ಲಿ ಕುಮಾರಣ್ಣ ಯಾವ ರೀತಿ ನಡೆದುಕೊಂಡರು ಅಂತ ಅಲ್ಲಿರುವ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ವನ್ನ ಕೇಳಿದ್ರೆ ಅರ್ಥಆಗುತ್ತೆ ಆದರೆ ಕಾಂಗ್ರೆಸ್ ಆಡಳಿತದಲ್ಲಿ ಟಾರ್ಗೆಟ್ ರಾಜಕೀಯ ಮಾಡಲಾಗುತ್ತೆ ಎಂದು ವಾಗ್ದಾಳಿ ನಡೆಸಿದರು.

ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ಸಂಖ್ಯಾ ಬಲ ಕುಸಿಯುತ್ತಿದೆ ಎಂದು ಸವಾಲು ಹಾಕಿದ್ದಾರೆ. ಅವರ ಸವಾಲನ್ನು ನಾವೆಲ್ಲರೂ ಪ್ರೀತಿಯಿಂದ ಸ್ವೀಕರಿಸಿ, ಮುಂಬರುವ 2028 ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಸ್ಥಾನಗಳನ್ನು ಗೆಲ್ಲುವ ಮೂಲಕ ಅವರಿಗೆ ತಕ್ಕ ಉತ್ತರ ಕೊಡೋಣ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ನನ್ನ ಗುರಿ ಪಕ್ಷದ ಕಾರ್ಯಕರ್ತರನ್ನ ದಡಮುಟ್ಟಿಸಬೇಕು. ಇದರಲ್ಲಿ ನನ್ನ ಸ್ವಾರ್ಥ ಏನು ಇಲ್ಲ. ಲಕ್ಷಾಂತರ ಜನ ಜೆಡಿಎಸ್ ಪಕ್ಷಕ್ಕೆ ನಿಸ್ವಾರ್ಥವಾಗಿ ಸೇವೆ ಮಾಡಿದ್ದಾರೆ. ಯಾವುದೇ ಫಲಪೇಕ್ಷೆ, ನಿರೀಕ್ಷೆಯಿಲ್ಲದೆ ಪಕ್ಷಕ್ಕಾಗಿ ದುಡಿದ್ದಿದಿರಾ ಎಂದು ಹೇಳಿದರು.

ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಗೌಡರು ನಿಮ್ಮೆಲ್ಲರ ಸಹಕಾರದಿಂದ 2028ಕ್ಕೆ ಶಾಸಕರಾಗಿ ಆಯ್ಕೆ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಶಿವಮೊಗ್ಗದಲ್ಲಿ ಇಬ್ಬರು ಶಾರದಮ್ಮನವರ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಭದ್ರಾವತಿ VISL ಕಾರ್ಖಾನೆಯನ್ನು ಮರು ನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಅತೀ ಶೀಘ್ರದಲ್ಲಿ VISL ಕಾರ್ಖಾನೆ ಮರುಸ್ಥಾಪನೆ ಆಗುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕುಮಾರಣ್ಣ ಕೇಂದ್ರದ ಸಚಿವರಾಗುತ್ತಿದ್ದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ನೂರಕ್ಕೆ ನೂರರಷ್ಟು ಇದಕ್ಕೆ ಮರು ಜೀವ ಕೊಡ್ತಾರೆ. ಜಿಲ್ಲೆಯ ಜನತೆಗೆ ಶಾಶ್ವತವಾಗಿ ಬದುಕು ಕಟ್ಟಿಕೊಳ್ಳುವುದಕ್ಕೆ ಈ ನಿರ್ಧಾರ ಮಾಡಿದ್ದಾರೆ ಎಂದರು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!