Rahul Gandhi's allegations are true, there was a Golmaal in the voting in Bengaluru Rural constituency too: D.K. Shivakumar

ರಾಹುಲ್ ಗಾಂಧಿ ಅವರ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ( D.K. Shivakumar) ಗುಡುಗಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು ಎಂದರು.

ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು

ಈ ವಿಚಾರವಾಗಿ ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡುತ್ತೇನೆ. ಇದು ನಮ್ಮ ರಾಜ್ಯದ ಸ್ವಾಭಿಮಾನದ ಪ್ರಶ್ನೆ. ಈ ವಿಚಾರದಲ್ಲಿ ನಮ್ಮ ಸಂಸದರು ಬಾಯಿ ಮುಚ್ಚಿಕೊಂಡಿರುವುದೇ ದೊಡ್ಡ ತಪ್ಪು. ನಮ್ಮ ರಾಜ್ಯದ 28 ಲೋಕಸಭೆ ಸದಸ್ಯರು, 12 ರಾಜ್ಯಸಭೆ ಸದಸ್ಯರು ಒಗ್ಗಟ್ಟಿನಿಂದ ಹೋರಾಡಿ ರಾಜ್ಯದ ಗೌರವ ಕಾಪಾಡಬೇಕಾಗಿದೆ.

ಗೋವಾದ ಕೇವಲ ಒಂದು ಸಂಸದರಿಗಾಗಿ ನಮ್ಮ ಕರ್ನಾಟಕವನ್ನು ಮಾರಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಸಂಸದರು, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸರಕಾರದ ಸಚಿವರು ಹಾಗೂ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಬೇಕು. ನಾನು ಕೂಡ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೇಳುತ್ತೇನೆ. ಎಲ್ಲಾ ಸಂಸದರ ನಿಯೋಗವನ್ನು ಕರೆದೊಯ್ಯುವ ಪ್ರಯತ್ನ ಮಾಡುತ್ತೇನೆ. ನಮ್ಮ ಜೊತೆ ಎಲ್ಲರೂ ಬರುವ ನಂಬಿಕೆ ಇದೆ. ಯಾರು ಬರುತ್ತಾರೋ ಬಿಡುತ್ತಾರೋ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ತಿಳಿಸಿದರು.

ಸರ್ವಪಕ್ಷ ಸಭೆ ಕರೆಯುತ್ತೀರಾ ಎಂದು ಕೇಳಿದಾಗ, “ಎಲ್ಲಾ ಪಕ್ಷಗಳ ಸಂಸದರ ಸಭೆ ಕರೆಯುವುದಾಗಿ ಹೇಳಿದ್ದೇನೆ” ಎಂದರು.

ಮಹದಾಯಿ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ದಾರಿ ತಪ್ಪಿಸುತ್ತಿದ್ದಾರಾ ಎಂದು ಕೇಳಿದಾಗ, “ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿದ್ದಾರೆ. ಅವರು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಾನು ಅವರನ್ನು ಐದಾರು ಬಾರಿ ಈ ವಿಚಾರಕ್ಕಾಗಿ ಭೇಟಿ ಮಾಡಿದ್ದೇನೆ. ಕೇಂದ್ರ ಅರಣ್ಯ ಸಚಿವರು ಕೂಡ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ಕೆಲಸಕ್ಕೆ ಬೆಂಬಲವಾಗಿದ್ದಾರೆ. ಎಲ್ಲಾ ಸಮಸ್ಯೆ ಇರುವುದು ಗೋವಾದಲ್ಲಿ” ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ ಅವರ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಇಲ್ಲಿ ಅನೇಕ ಗೋಲ್ಮಾಲ್ ಗಳು ನಡೆದಿವೆ. ಈ ವಿಚಾರವಾಗಿ ಸಧ್ಯಕ್ಕೆ ನಾನು ಹೆಚ್ಚು ವಿಚಾರ ಪ್ರಸ್ತಾಪ ಮಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಮಾತನಾಡುತ್ತೇನೆ” ಎಂದರು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!