ದೊಡ್ಡಬಳ್ಳಾಪು; ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ ಯೂನಿರ್ವಸಿಟಿ ಸಮೀಪ ಸಂಭವಿಸಿದೆ.
ಮೃತ ದುರ್ದೈವಿಯನ್ನು ಕುಂದಾಣ ಸಮೀಪದ ಚಿನ್ನಕೆಂಪನಹಳ್ಳಿ ನಿವಾಸಿ 35 ವರ್ಷದ ಹರೀಶ್ ಎಂದು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ಮಾರ್ಗವಾಗಿ ನೆಲಮಂಗಲ ಕಡೆಗೆ ಗೆಳೆಯ ಅಜಯ್ ಎನ್ನುವವರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನೆಲಮಂಗಲ ಕಡೆಯಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಕ್ಯಾಂಟರ್ ಬಲಭಾಗದಲ್ಲಿ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಹರೀಶ್ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಮತ್ತೊರ್ವ ಸವಾರ ಅಜಯ್ ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬೆಳವೆಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.