Janaspandana Program: Opportunity to apply online; DC AB Basavaraju

ಜನಸ್ಪಂದನ ಕಾರ್ಯಕ್ರಮ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ; ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂ.ಗ್ರಾ.ಜಿಲ್ಲೆ: ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ (DC) ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಲು ಒಂದೇ ವೇದಿಕೆಯನ್ನು ಕಲ್ಪಿಸುವ ಸಲುವಾಗಿ ಜನಸ್ಪಂದನ/ಸಾರ್ವಜನಿಕ ಕುಂದು ಕೊರತೆ ಸಭೆ ಆಯೋಜಿಸಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜನರ ಅಹವಾಲನ್ನು ಆಲಿಸಿ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಜಿಲ್ಲಾಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರತಕ್ಕದ್ದು ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಅಹವಾಲು ಆಲಿಸಬೇಕು.

ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮಗಳಲ್ಲಿ ಸಂಬಂಧಿತ ಉಪವಿಭಾಗಾಧಿಕಾರಿಗಳು ಒಂದೊಂದು ಮಾಹೆ ಒಂದೊಂದು ತಾಲ್ಲೂಕಿನಲ್ಲಿ ಹಾಜರಿರಬೇಕು. ಜನಸ್ಪಂದನ ಕಾರ್ಯಕ್ರಮದ ಸಮಯ ಹಾಗೂ ದಿನಾಂಕ, ಸ್ಥಳವನ್ನು ಆಯಾ ತಾಲ್ಲೂಕು, ಜಿಲ್ಲೆಯಲ್ಲಿ ಹೆಚ್ಚಿನ ಪ್ರಚುರ ಪಡಿಸಲಾಗುವುದು.

ಆನ್ಲೈನ್ ಮೂಲಕ ಅಹವಾಲು ದಾಖಲಿಸಿ

ಜಿಲ್ಲೆಯ ಎಲ್ಲಾ ರೈತಾಪಿ ವರ್ಗದವರಿಗೆ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಜನತೆಗೆ ಸಾಮಾಜಿಕ ಶೈಕ್ಷಣಿಕ ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ವಿವಿಧ ಇಲಾಖೆಗಳಲ್ಲಿ ದೊರೆಯಬೇಕಾದ ಸೌಲಭ್ಯಗಳು ನಿಗದಿತ ಅವಧಿಯೊಳಗೆ ದೊರೆಯದೆ ಇದ್ದಾಗ ತಮ್ಮ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣ ತಂತ್ರಾಂಶ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಿದೆ.

ಅದರಂತೆ ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಯು ಜನಸ್ಪಂದನ ಪೋರ್ಟಲ್ https://espandana.karnataka.gov.in ಅಥವಾ https://ipgrs.karnataka.gov.in, https://play.google.com/store/apps/details?id=com.csg.ipgrs ನಲ್ಲಿಯೂ ಲಭ್ಯವಿರುತ್ತದೆ. ಇದರಲ್ಲಿ ಸಾರ್ವಜನಿಕರು ನೇರವಾಗಿ ತಮ್ಮ ಹವಾಲುಗಳನ್ನು ತಂತ್ರಾಂಶದ ಮೂಲಕ ದಾಖಲಿಸಬಹುದಾಗಿರುತ್ತದೆ.

ಏಕೀಕೃತ ಸಾರ್ವಜನಿಕ ಕುಂದು ಕೊರತೆ ವ್ಯವಸ್ಥೆಗೆ ಮೀಸಲಾದ 1902 ಸಹಾಯವಾಣಿಯು ಸಹ ನಾಗರಿಕರಿಗೆ ಲಭ್ಯವಿರುತ್ತದೆ. ಅಂತರ್ಜಾಲ ವ್ಯವಸ್ಥೆ ಇಲ್ಲದ ಕುಗ್ರಾಮಗಳಿಂದಲೂ ಸಹ ಸಾರ್ವಜನಿಕರು 1902 ಸಹಾಯವಾಣಿಗೆ ಕರೆ ಮಾಡಿ ದೂರು/ ಕುಂದು ಕೊರತೆಗಳನ್ನು ದಾಖಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!