ಝಲಾವರ್; ರಾಜಸ್ಥಾನದ ಝಲಾವರ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ (school roof collapses) ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
Heart breaking 💔& Tragic News early this Morning.
— Sunaina Bhola (@sunaina_bhola) July 25, 2025
A School Building roof collapses in #Jhalawar of #Rajasthan.
over 60 children trapped.
5 lost lives 😢
Who will pay the price for this negligence?#buildingcollapse #viralvideo #KiaraAdvani#AnilAmbani #Sarzameen #Breaking pic.twitter.com/b14EWTZPZ4
ಇಂದು ( ಶುಕ್ರವಾರ) ಬೆಳಗ್ಗೆ ಮಕ್ಕಳು ತರಗತಿಗಳಿಗೆ ಹಾಜರಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಪಿಪ್ಲೋಡಿ ಪ್ರಾಥಮಿಕ ಶಾಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಪೊಲೀಸರು, ಸ್ಥಳೀಯ ನಿವಾಸಿಗಳು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.
20 ವರ್ಷ ಹಳೆಯ ಶಾಲಾ ಕಟ್ಟಡವು ಕಲ್ಲಿನ ಚಪ್ಪಡಿಗಳಿಂದ ಮಾಡಿದ ಛಾವಣಿಯನ್ನು ಹೊಂದಿತ್ತು, ಇದು ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಸಿದ್ದಾರೆ.
“ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ. ಹತ್ತು ಮಕ್ಕಳನ್ನು ಝಾಲಾವರ್‌ಗೆ ಕಳುಹಿಸಲಾಗಿದೆ, ಅವರಲ್ಲಿ ಮೂರರಿಂದ ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ” ಎಂದು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಸಾವನಪ್ಪಿದವರಲ್ಲಿ 12 ರಿಂದ 14 ವರ್ಷ ವಯಸ್ಸಿನ 7 ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ.
ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮದನ್ ದಿಲಾವರ್ ಹೇಳಿದ್ದಾರೆ.