ದೊಡ್ಡಬಳ್ಳಾಪುರದಲ್ಲಿ ಹಲ್ಲೆ ನಡೆದಿದ್ದು ನಿಜ; ಪ್ರಥಮ್ ಸ್ಪಷ್ಟಣೆ.. ಜಗದೀಶ್ ವಿರುದ್ಧ ಕಿಡಿ

Doddaballapura: Kannadigara Karnataka Rakshana Vedike shocked Bigg Boss winner Pratham and Jagadish..!

ದೊಡ್ಡಬಳ್ಳಾಪುರ: ಬಿಗ್ ಬಾಸ್ ವಿನ್ನರ್ ನಟ ಪ್ರಥಮ್ (Pratham) ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಅವರು ಆರೋಪ ಮಾಡಿದ್ದಾರೆ.

ಈ ಕುರಿತಂತೆ ನಟ ಪ್ರಥಮ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದು, 4 ದಿನಗಳ ಹಿಂದೆ ಈ ಘಟನೆ ನಡೆದಿದ್ದು ನಿಜ, ನನ್ನ ಕೆಲಸದಲ್ಲಿ busyಇದ್ದೆ. ಜಗದೀಶ್ ರವರು ಫೋನ್ ಮಾಡುತ್ತಲೇ ಇದ್ರು ಅಂತ ಮಾತಾಡಿದೆ.

ಅದನ್ನ‌ record ಮಾಡಿ social mediaಲಿ ಹಾಕಬೇಕಿರ್ಲಿಲ್ಲ! ನಾನು ಹೇಗೆ ಎಚ್ಚರಿಕೆಯಿಂದ ಇರ್ಬೇಕು ತಿಳಿದಿದೆ! ನಂಬಿಕೆ ಇಟ್ಟು ಮಾತಾಡಿದಾಗ record ಮಾಡಿ ಹಾಕ್ದ್ರಿಂದ ಇನ್ಮೇಲೆ ಹೇಗೆ ನಂಬೋದು ಹೇಳಿ? ಎಂದು ಜಗದೀಶ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ಘಟನೆ ಸಂಬಂಧ ಜಗದೀಶ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಖಾಸಗಿ ತೋಟದಲ್ಲಿ ನಡೆದ ದೇವರ ಊಟಕ್ಕೆ ಬಂದಿದ್ದ ವೇಳೆ ರೌಡಿಗಳ ಗುಂಪು ಆತನನ್ನು ದೇವಾಲಯದ ಹಿಂಭಾಗ ಕರೆದಿಕೊಂಡು ಹೋಗಿ ಡ್ರಾಗರ್, ಲಾಂಗು ಸೇರಿದಂತೆ ಹರಿತವಾದ ಆಯುಧಗಳನ್ನು ಇಟ್ಟು ಹಲ್ಲೆ ಮಾಡಿದ್ದಾರೆಂದು ಲಾಯರ್ ಜಗದೀಶ್ ಆರೋಪಿಸಿದ್ದರು‌.

ಇನ್ನು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರು ಖುದ್ದು ನಟ ಪ್ರಥಮ್ ಅವರಿಗೆ ಕರೆ ಮಾಡಿ ದೂರು ನೀಡುವಂತೆ ಕೇಳಿದ್ದು ಇದಕ್ಕೆ ಪ್ರಥಮ್ ಪ್ರತಿಕ್ರಿಯೆ ನೀಡಿಲ್ಲ ಎಂದು ಸಹ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ.

ಇನ್ನು ಹಲ್ಲೆ ಮಾಡುವ ವೇಳೆ ರೌಡಿಗಳ ಗುಂಪಿನೊಂದಿಗೆ ದಿ.ನಟ ಬುಲ್ಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲ್ಲೆಟ್ ಅಹ ಇದ್ದರು ಎಂದು ಸಹ ಆರೋಪಿಸಿದ್ದು, ಒಬ್ಬ ಸೆಲೆಬ್ರೆಟಿಗೆ ರಕ್ಷಣೆ ಇಲ್ಲದೆ ಹೋದರೆ ಹೇಗೆ ಎಂದು ಗೃಹಸಚಿವ ಪರಮೇಶ್ವರ್ ಹಾಗು ಸಿಎಂ ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆ ಜುಲೈ.22 ರಂದು ನಡೆದಿದೆ ಎನ್ನಲಾಗುತ್ತಿದ್ದು, ಇದುವರೆವಿಗೂ ಪ್ರಥಮ್ ದೂರು ನೀಡದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ‌.

ಇನ್ನೂ ಈ ಘಟನೆ ನಡೆದಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಅಂದು ಈ ವ್ಯಾಪ್ತಿಯಲ್ಲಿ ಯಾವುದೇ ದೇವಾಲಯದ ಉದ್ಘಾಟನೆ ನಡೆದಿಲ್ಲ.

ಆದರೆ ಪ್ರಥಮ್ ದೊಡ್ಡಬಳ್ಳಾಪುರದ ನಂದಿಮೋರಿ ರಸ್ತೆ ವ್ಯಾಪ್ತಿಯಲ್ಲಿನ ಸ್ನೇಹಿತನ ತೋಟದಲ್ಲಿ ನಡೆದ ಮಾಂಸದೂಟದಲ್ಲಿ ಭಾಗಿಯಾಗಿದ್ದರು, ಈ ವೇಳೆ ಗೆಳೆಯರ ನಡುವೆ ತಮಾಷೆಯಾಗಿಯೇ ಇದ್ದು, ಸ್ಥಳದಿಂದ ತೆರಳಿದ್ದಾರೆ ಎನ್ನಲಾಗುತ್ತಿದ್ದು, ಯಾವುದೇ ಗಲಾಟೆಯಾಗಲಿ, ಹಲ್ಲೆಯಾಗಲಿ ನಡೆದಿಲ್ಲ ಎಂದು ಸ್ಥಳದಲ್ಲಿದ್ದವರು ಪೊಲೀಸರ ವಿಚಾರಣೆಯಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೀಗ ಬಂದ ಮಾಹಿತಿ ಅನ್ವಯ, ಇಂದು ಸಂಜೆ ಪ್ರಥಮ್ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಬಹುದು ಎಂದು ತಿಳಿದುಬಂದಿದೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]