ದೊಡ್ಡಬಳ್ಳಾಪುರ: ಮನೆ ಮನೆಗೆ ಪೊಲೀಸ್ (Police) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆ ಜುಲೈ 27 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕಿನ ರಾಜಘಟ್ಟ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.