SP CK Baba launches door-to-door police project in Rajghat

ರಾಜಘಟ್ಟದಲ್ಲಿ ಮನೆ ಮನೆಗೆ ಪೊಲೀಸ್‌ ಯೋಜನೆಗೆ ಎಸ್ಪಿ ಸಿಕೆ ಬಾಬಾ ಚಾಲನೆ

ದೊಡ್ಡಬಳ್ಳಾಪುರ; ತಾಲ್ಲೂಕಿನ ರಾಜಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್‌ (Police) ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬಾ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಪೊಲೀಸ್‌ ಇಲಾಖೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದುಕೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ.

ಸ್ಥಳೀಯರಿಂದ ಸೂಕ್ಷ್ಮ ಮಾಹಿತಿಗಳನ್ನು ಪಡೆದುಕೊಳ್ಳಲು, ಅಪರಾಧಗಳನ್ನು ತಡೆಯಲು ಹಾಗೂ ಅಪರಾಧ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪತ್ತೆ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್‌ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಹಭಾಗಿತ್ವ ಹೆಚ್ಚಾಗಿ, ಇಲಾಖೆ, ಸಾರ್ವಜನಿಕ ಸ್ನೇಹಿಯಾಗಿಸಿ, ಸಮಾಜಕ್ಕೆ ಉತ್ತಮ ಪೊಲೀಸ್‌ ಸೇವೆಯನ್ನು ಒದಗಿಸಬಹುದಾಗಿದೆ.

ಮನೆ–ಮನೆಗೆ ಭೇಟಿ ನೀಡುವುದರಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ. ಜನರಲ್ಲಿ ಸುರಕ್ಷತಾ ಮನೋಭಾವ ಮೂಡಲಿದೆ. ಸೈಬರ್ ಅಪರಾಧಗಳ ಅರಿವು ಮೂಡಿಸಲಾಗುವುದು, ಪೊಲೀಸ್ ಇಲಾಖೆ ನೆರವು ಪಡೆಯುವ ವಿಧಾನ ಸೇರಿದಂತೆ ಇಲಾಖೆಯ ಸಮಗ್ರ ಸೇವೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಈ ಹಿಂದೆ ದೂರುದಾರರು ಠಾಣೆಗೆ ಬಂದು ದೂರು ನೀಡಿದಾಗ ಅದನ್ನು ದಾಖಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತಿದ್ದರು, ಈಗ ಪೊಲೀಸರು ಸಾರ್ವಜನಿಕರ ಮನೆಗೆ ಹೋಗಿ ಅಹವಾಲು ಆಲಿಸುವ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆ ಸ್ನೇಹಮಯಿಯಾಗಿದೆ, ಪೊಲೀಸರು ಮನೆಗೆ ಬಂದಾಗ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ ಎಂದು ಹೇಳಿದರು.

ಅಪರಾಧಗಳ ಸ್ವರೂಪ ಈಗ ಡಿಜಿಟಲ್ ರೂಪ ಪಡೆದಿದೆ, ಡಿಜಿಟಲ್ ಅರೆಸ್ಟ್ ಮೂಲಕ ಹೆದರಿಸಿ ಹಣ ಕೀಳುವ, ಮೋಸ ಮಾಡುವ ಕೃತ್ಯಗಳು ಹೆಚ್ಚಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.

ಡಿವೈಎಸ್ಪಿ ರವಿ ಕುಮಾರ್ ಮಾತನಾಡಿ,
ಪ್ರತಿಯೊಂದು ಪೊಲೀಸ್‌ ಠಾಣೆಗಳ ಇ–ಬೀಟ್‌ ವ್ಯವಸ್ಥೆ ಅನ್ವಯ ವಿಂಗಡಿಸಲಾದ ಪ್ರದೇಶದಲ್ಲಿರುವ ಮನೆಗಳ ಪಟ್ಟಿ ಮಾಡಿಕೊಂಡು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಭೇಟಿ ನೀಡಿ, ಆಹವಾಲು ಆಲಿಸಲಿದ್ದಾರೆ. ಸಮಾಜದ ಸುರಕ್ಷತೆ ಹಾಗೂ ಸ್ವಾಸ್ಥ್ಯ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ, ಸಮಾಜದಲ್ಲಿ ಆಗಬಹುದಾದ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಬಹಳಷ್ಟು ದೂರುಗಳು ಬಂದವು. ಶಾಲೆಯಲ್ಲಿ ಜಾತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂದು ಶಾಲಾ ವಿದ್ಯಾರ್ಥಿ ಹೇಳಿದರು.

ಅಟ್ರಾಸಿಟಿ ಗೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕುಂದು ಕೊರತೆ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ, ನಗರ ಠಾಣೆಯ ಇನ್ಸಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆಯ ಇನ್ಸಪೆಕ್ಟರ್ ನವೀನ್ ಕುಮಾರ್, ದೊಡ್ಡ ಬೆಳವಂಗಲ ಠಾಣೆಯ ಇನ್ಸಪೆಕ್ಟರ್ ಕಲ್ಲಪ್ಪ ಹೊಸಹಳ್ಳಿ ಠಾಣೆಯ ರಾವ್ ಗಣೇಶ ಜನಾರ್ಧನ್ ಹಾಗೂ ಸಿಬ್ಬಂದಿಗಳು, ಮುಖಂಡರು ಹಾಜರಿದ್ದರು.

ರಾಜಕೀಯ

ಜು.28 ರಂದು ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ

ಜು.28 ರಂದು ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಆರೋಪಿಸಿದ್ದಾರೆ

[ccc_my_favorite_select_button post_id="111749"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!