Congress party has been deceiving the exploited by making them vote banks: B.Y. Vijayendra

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕಳೆದ ಎರಡೂವರೆ ವರ್ಷಗಳಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸರಕಾರವು ಶೋಷಿತ ಸಮುದಾಯವನ್ನು ಮತಬ್ಯಾಂಕಾಗಿ ಬಳಸಿಕೊಳ್ಳುತ್ತಿದೆ. ಆ ಸಮುದಾಯಗಳಿಗೆ ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ವಂಚನೆ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.

ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಿಚಾರಗಳಿಗೆ ಬಳಸಿಕೊಳ್ಳಬೇಕಾದ ಅನುದಾನವನ್ನು ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಿ, ಆ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಬಿಜೆಪಿ ಇದರ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ; ಸದನದ ಒಳಗೆ ಮತ್ತು ಹೊರಗಡೆ ಹೋರಾಟ ನಡೆಸಲಾಗಿದೆ ಎಂದು ವಿವರಿಸಿದರು.

ಸಿದ್ದರಾಮಯ್ಯನವರು ಈಗಲೂ ಶೋಷಿತ ಸಮುದಾಯಗಳನ್ನು ವಂಚಿಸುವ ಕಾರ್ಯವನ್ನು ಮುಂದುವರೆಸಿದ್ದಾರೆ. 2025-26ರಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 11,896 ಕೋಟಿ ರೂ.ಗಳನ್ನು ಮತ್ತೊಮ್ಮೆ ಇತರ ಕಾರ್ಯಕ್ರಮಗಳಿಗೆ ವರ್ಗಾಯಿಸಿದ್ದಾರೆ. ಈ ಮೂಲಕ ಈ ಸಮುದಾಯಗಳಿಗೆ ವಂಚಿಸುತ್ತಿದ್ದಾರೆ ಎಂದು ಟೀಕಿಸಿದರು.

ಈ ಕುರಿತು ಸದನದಲ್ಲಿ ಚರ್ಚೆ ಮಾಡಲಿದ್ದೇವೆ, ಸರಕಾರದ ಕಿವಿ ಹಿಂಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ತಲುಪಬೇಕೆಂದು ಹಾಗೂ ನ್ಯಾಯ ಸಿಗಬೇಕೆಂದು ಬಿಜೆಪಿ ನಂಬಿದೆ. ಇದೇ ನಿಟ್ಟಿನಲ್ಲಿ ಬಿಜೆಪಿ ಬಲವಾದ ಹೋರಾಟ ಸಂಘಟಿಸಲಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ಶೋಷಿತ ಸಮುದಾಯಗಳ ಪರವಾಗಿ ಧ್ವನಿ ಎತ್ತುವ ಕರ್ತವ್ಯ ಮಾಡಲಿದೆ ಎಂದು ನುಡಿದರು.

ಹಿಂದುಳಿದ ವರ್ಗ, ಸಮುದಾಯದ ಕುರಿತು ಮೊಸಳೆಕಣ್ಣೀರು ಸುರಿಸುವ ಕಾಂಗ್ರೆಸ್ ಮುಖಂಡರು ಅಹಿಂದವನ್ನು ಮುಂದಿಟ್ಟುಕೊಂಡು, ರಾಜ್ಯದ ಜನರ ವಿಶ್ವಾಸ ಗೆದ್ದು ಅಧಿಕಾರಕ್ಕೆ ಬಂದಿದ್ದಾರೆ. ಅದರ ನೇತೃತ್ವ ಸಿದ್ದರಾಮಯ್ಯನವರದು. ಅವರ ನೇತೃತ್ವದಲ್ಲೇ ಅನ್ಯಾಯ ಆಗುತ್ತಿದ್ದು ಅದನ್ನು ನಾವು ಪ್ರಶ್ನಿಸುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಮತಬ್ಯಾಂಕಾಗಿ ಶೋಷಿತ ಸಮುದಾಯಗಳ ಬಳಕೆ

ನಿನ್ನೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬಹಳ ನೋವಿನಿಂದ ಅವರ ಮನದಾಳದ ಮಾತನ್ನು ರಾಜ್ಯದ ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 40-50 ವರ್ಷಗಳಿಂದ ಹೋರಾಟ ಮಾಡುತ್ತ ಬಂದು ಪಕ್ಷ ಸಂಘಟಿಸಿದರೂ ತಮಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂದು ನೋವನ್ನು ತೋಡಿಕೊಂಡಿದ್ದಾಗಿ ವಿವರಿಸಿದರು.

ಗಾಂಧಿ ಕುಟುಂಬ, ಕಾಂಗ್ರೆಸ್ ಪಕ್ಷ ಅಥವಾ ಸಿದ್ದರಾಮಯ್ಯನವರು ಹೇಗೆ ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯ ಮಾಡುತ್ತ ಬರುತ್ತಿವೆ ಎಂಬುದನ್ನು ಖರ್ಗೆಯವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಈಗಲಾದರೂ ಖರ್ಗೆಯವರ ಮಾತನ್ನು ಗಂಭೀರವಾಗಿ ಪರಿಗಣಿಸಲಿದೆಯೇ ಎಂದು ಪ್ರಶ್ನಿಸಿದರು. ಈ ಪ್ರಶ್ನೆಗೆ ಕಾಲವೇ ಉತ್ತರ ಹೇಳಬೇಕಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿ- ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿ ಆ ಸಮುದಾಯಗಳಿಗೆ ವಂಚನೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಪಕ್ಷದಲ್ಲಿ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗುತ್ತಿಲ್ಲ; ಸ್ವಾತಂತ್ರ್ಯಾನಂತರ ತಮ್ಮ ಸಮುದಾಯಗಳನ್ನು ಮತಬ್ಯಾಂಕಾಗಿ ದುರ್ಬಳಕೆ ಮಾಡುತ್ತಿದ್ದಾರೆಯೇ ಹೊರತು ನ್ಯಾಯ ಸಿಗುತ್ತಿಲ್ಲ ಎಂಬುದನ್ನು ಮಾರ್ಮಿಕವಾಗಿ ಹೇಳಿದ್ದು, ಆ ವಿಷಯವನ್ನು ಎಲ್ಲರೂ ಗಮನಿಸಿದ್ದಾರೆ ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಶಿಕಾರಿಪುರ ಸೇರಿದಂತೆ ರಾಜ್ಯದ 224 ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಚುನಾವಣೆ ಬಂದಾಗ ತೀರ್ಮಾನ ಆಗಲಿದೆ. ಇವತ್ತು ನಾನಾಗಲೀ, ಯಾರೇ ಇದ್ದರೂ ಅದರ ಕುರಿತು ತೀರ್ಮಾನ ಮಾಡಲು ಸಾಧ್ಯವಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜಕೀಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ

ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111790"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದ (Dharmasthala) ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ

[ccc_my_favorite_select_button post_id="111774"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!