Legislative Summit 2025 in the USA from August 4

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಬೆಂಗಳೂರು: ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ “ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಲ ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ.

“ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ”ಹಾಗೂ
“ರಾಷ್ಟ್ರೀಯ ಶಾಸಕರ ಸಮಾವೇಶ”ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಈ ಶೃಂಗ ಸಭೆಯಲ್ಲಿ ಭಾರತ ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ಸುಮಾರು 15,000 ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮೂರು ದಿನಗಳ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿರುವ ಸಭಾಪತಿ ಬಸವರಾಜ ಹೊರಟ್ಟಿರವರ ನೇತೃತ್ವದ ತಂಡ, ನ್ಯೂಯಾರ್ಕ, ಡಲ್ಲಾಸ್, ಬಫ್ಯಾಲೋ ನಗರ ಸೇರಿದಂತೆ ವಿವಿದೆಡೆ ಅಧ್ಯಯನ ಪ್ರವಾಸ ನಡೆಸಿ ಆಗಸ್ಟ್ 03 ರಂದು ಬೋಸ್ಟನ್ ನಗರ ತಲುಪಲಿದೆ. ಆಗಸ್ಟ್ 4 ರಿಂದ 6 ರವರೆಗೆ ಶೃಂಗ ಸಭೆಯಲ್ಲಿ ಪಾಲ್ಗೊಂಡು ದಿನಾಂಕ 7 ರಂದು ಬೋಸ್ಟ್ನ್ ನಗರದಲ್ಲಿ ಅಧ್ಯಯನ ಪ್ರವಾಸ ನಡೆಸಲಿರುವ ತಂಡ ಆಗಸ್ಟ್ 8ರ ರಾತ್ರಿ ಬೋಸ್ಟನ್ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದೆ.

ಶಾಸಕಾಂಗ ಶೃಂಗಸಭೆ 2025 ರಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸ್‌ರಾಜು,ವಿರೋಧ ಪಕ್ಷದ ಮುಖ್ಯಸಚೇತಕ ಎನ್.ರವಿಕುಮಾರ್,ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್,ವಿಧಾನ ಪರಿಷತ್ ಶಾಸಕರುಗಳಾದ ಭಾರತಿ ಶೆಟ್ಟಿ, ಬಲ್ಕೀಸ್ ಬಾನು, ಹೇಮಲತಾ ನಾಯಕ್ ಮತ್ತು ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.

ರಾಜಕೀಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ

ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111790"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದ (Dharmasthala) ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ

[ccc_my_favorite_select_button post_id="111774"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!