ಗುಡ್ಮಾರ್ನಿಂಗ್ ನ್ಯೂಸ್; ಟ್ರಂಪ್ ಎದುರು 56 ಇಂಚಿನ ಎದೆ 36 ಇಂಚಿಗೆ ಕುಗ್ಗುತ್ತದೆ: TMC ಸಂಸದ ವಾಗ್ದಾಳಿ| Video

56-inch chest shrinks to 36 inches in front of Trump: TMC MP

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎದುರು 56 ಇಂಚಿನ ಎದೆ 36 ಇಂಚಿಗೆ ಕುಗ್ಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee) ಅವರು ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ತಿನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂದೂರ್ ಕುರಿತು ತೀವ್ರ ಚರ್ಚೆಯ ಸಂದರ್ಭದಲ್ಲಿ ಟಿಎಂಸಿ ಸಂಸದರು ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮೇ 10 ರಂದು ಪಾಕಿಸ್ತಾನದೊಂದಿಗೆ ಕದನ ವಿರಾಮದ ಕುರಿತು ಮಾತನಾಡುತ್ತಾ ಪ್ರಧಾನಿಯನ್ನು ಟೀಕಿಸಿದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಹಲವು ದಿನಗಳ ಮಿಲಿಟರಿ ಯುದ್ಧದ ಬಳಿಕ ನಾನೇ ಎರಡು ದೇಶಗಳ ನಡುವೆ ಕದನ ವಿರಾಮ ಘೋಷಿಸಲು ಕಾರಣವಾಗಿದ್ದೇನೆ ಎಂದು ಟ್ರಂಪ್ ನಿರಂತರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ, ಒಮ್ಮೆ ನೀವು ನಿಮ್ಮX’ ಹ್ಯಾಂಡಲ್‌ನಲ್ಲಿ ಅಮೆರಿಕದ ಅಧ್ಯಕ್ಷರು ಹೇಳಿದ್ದೆಲ್ಲವೂ ತಪ್ಪು ಎಂದು ಪೋಸ್ಟ್ ಮಾಡಲು ಏಕೆ ಸಾಧ್ಯವಾಗಲಿಲ್ಲ? ನೀವು ಅಮೆರಿಕದ ಅಧ್ಯಕ್ಷರ ಮುಂದೆ ನಿಂತ ಕ್ಷಣ, ನಿಮ್ಮ ಎತ್ತರ 5 ಅಡಿಗಳಿಗೆ ಇಳಿಯುತ್ತದೆ ಮತ್ತು ನಿಮ್ಮ ಎದೆ 56 ಇಂಚುಗಳಿಂದ 36 ಇಂಚುಗಳಿಗೆ ಇಳಿಯುತ್ತದೆ. ನೀವು ಅಮೆರಿಕಾ ಅಧ್ಯಕ್ಷರಿಗೆ ಏಕೆ ಹೆದರುತ್ತೀರಿ? ಎಂದು ಬ್ಯಾನರ್ಜಿ ಪ್ರಶ್ನಿಸಿದರು.

ವಾರದ ಹಿಂದೆ ಭಾರತ-ಪಾಕಿಸ್ತಾನ ಸಂಘರ್ಷವನ್ನು ಪರಿಹರಿಸಿದ್ದಕ್ಕಾಗಿ ಶ್ವೇತಭವನವು ಟ್ರಂಪ್ ಅವರನ್ನು ಶ್ಲಾಘಿಸಿತು. ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರ ವಿದೇಶಾಂಗ ನೀತಿಯನ್ನು ಬಣ್ಣಿಸಿದರು. ಅದಕ್ಕೂ ಮುನ್ನ ಮೇ ತಿಂಗಳಲ್ಲಿ ನಡೆದ ಯುದ್ದದ ಸಮಯದಲ್ಲಿ ಸುಮಾರು ನಾಲ್ಕರಿಂದ ಐದು ಜೆಟ್‌ಗಳನ್ನು ಹೊಡೆದುರುಳಿಸಲಾಯಿತು ಎಂದು ಟ್ರಂಪ್ ಹೇಳಿಕೊಂಡಿದ್ದರೂ, ವ್ಯಾಪಾರದ ನೆಪವನ್ನು ಬಳಸಿಕೊಂಡು ಎರಡು ಪರಮಾಣು ಶಸ್ತ್ರಸಜ್ಜಿತ ದೇಶಗಳ ನಡುವಿನ ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಅವರು ಮತ್ತೆ ಹೇಳಿಕೊಂಡರು ಎಂದು ಕಟುವಾಗಿ ಟೀಕಿಸಿದರು.

ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರಿಂದ 26 ನಾಗರಿಕರು ಸಾವನ್ನಪ್ಪಿದ ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ನಡೆಸಿತು. ಬಳಿಕ ಕದನವಿರಾಮ ಘೋಷಿಸಲಾಯಿತು.

ಇತ್ತ ಜುಲೈ 21 ರಂದು ಮಳೆಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಪ್ರಕ್ರಿಯೆ ಸೇರಿದಂತೆ ಸಾರ್ವಜನಿಕ ಮಹತ್ವದ ವಿಷಯಗಳ ಕುರಿತು ಚರ್ಚಿಸುವಂತೆ ಪ್ರತಿಪಕ್ಷಗಳ ಒತ್ತಾಯಿಸುತ್ತಲೇ ಬಂದಿವೆ.

ಹೀಗಾಗಿ ಗದ್ದಲಗಳ ನಡುವೆ ಸಂಸತ್ತು ನಿರಂತರವಾಗಿ ಮುಂದೂಡಿಕೆಗಳಿಗೆ ಸಾಕ್ಷಿಯಾಗಿದೆ. ಆ ಬಳಿಕ ನಿನ್ನೆ ಮತ್ತು ಇಂದು ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ತಲಾ 16 ಗಂಟೆಗಳ ಸುದೀರ್ಘ ಚರ್ಚೆಗೆ ಅವಕಾಶ ಕಲ್ಪಿಸಲಾಯಿತು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]