ದೊಡ್ಡಬಳ್ಳಾಪುರ: ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.
ಇದಕ್ಕೆ ಪೂರಕ ಎಂಬಂತೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕನೋರ್ವ ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳಲು ತೆರಳಿ, ಆಕಸ್ಮಿಕವಾಗಿ ಬಿದ್ದು ಸಾವನಪ್ಪಿರುವ ಘಟನೆ ತಾಲೂಕಿನ ಸೋತೇನಹಳ್ಳಿಯಲ್ಲಿ ಸಂಭವಿಸಿದೆ.
ಮೃತರನ್ನು ಕೋಲಾರ ಮೂಲದ ಕೂಲಿ ಕಾರ್ಮಿಕ 40 ವರ್ಷದ ಕೇಶವ ಎಂದು ಗುರುತಿಸಲಾಗಿದೆ.
ಕೃಷ್ಣ ಮೂರ್ತಿ ಎನ್ನುವವರು ಸೋತೆನಹಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸಿರುವ ಕೃಷಿ ಹೊಂಡದಿಂದ ಬಿಂದಿಗೆಯಲ್ಲಿ ನೀರು ತರಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಶವವನ್ನು ಹೊರತೆಗೆದಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.