ದೊಡ್ಡಬಳ್ಳಾಪುರದಲ್ಲಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ದೂರಿನ ಬೆನ್ನಲ್ಲೆ SP ಆಫೀಸ್ಗೆ ಪ್ರಥಮ್ ದೌಡು.. ಹಲ್ಲೆ ಆರೋಪದ ಬಗ್ಗೆ ದೂರು

Pratham rushes to SP office.. Complaint about assault allegations

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಹಲ್ಲೆ ನಡೆಸಿ, ಹತ್ಯೆ ಯತ್ನ ನಡೆದಿದೆ ಎಂದು ಖಾಸಗಿ ಚಾನಲ್‌ಗಳ ಮುಂದೆ ಆರೋಪಿಸುತ್ತಲೇ ಇದ್ದ ಬಿಗ್ ಬಾಸ್ ವಿಜೇತ ಪ್ರಥಮ್ (Pratham), ದೊಡ್ಡಬಳ್ಳಾಪುರ ಹಾಗೂ ಪೊಲೀಸ್ ಇಲಾಖೆಯ ಗೌರವಕ್ಕೆ ದಕ್ಕೆ ಎಂದು ಕನ್ನಡಿಗರ ರಕ್ಷಣಾ ವೇದಿಕೆ ದೂರಿನ ಬೆನ್ನಲ್ಲೇ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೌಡಾಯಿಸಿದ ಪ್ರಥಮ್, ಘಟನೆ ನಡೆದು 7 ದಿನಗಳ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಪ್ರಥಮ್ ಉಲ್ಲೇಖ ಮಾಡಿದ್ದಾರೆ.

ಜುಲೈ. 22 ರಂದು ಮಹೇಶ್ ಎಂಬ ಸಿನಿಮಾ ಪ್ರೊಮೋಟರ್‌ರವರು ನನಗೆ ದೊಡ್ಡಬಳ್ಳಾಪುರದ ಎಲ್ಲಮ್ಮ ದೇವಸ್ಥಾನದ ಪೂಜೆಗೆ ಕರೆದಿದ್ದು ಪೂಜೆ ಮುಗಿಸಿ ಸುಮಾರು 15.50 ಗಂಟೆಗೆ ನಾನು ವಾಪಸ್ಸು ಬರುವ ವೇಳೆ, ಯಶಸ್ವಿನಿ ಮತ್ತು ಬೇಕರಿ ರಘು ಹಾಗೂ ಒಂದಷ್ಟು ಅಪರಿಚಿತರು ಕಾರನ್ನು ಸುತ್ತುವರೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು(ಗ್ರಾಮದ ಹೆಸರು ತಿಳಿದಿರುವುದಿಲ್ಲ ಸ್ಥಳವನ್ನು ಗುರ್ತಿಸುತ್ತೇನೆ).

ಈ ವೇಳೆ ದರ್ಶನ್‌ರವರನ್ನು ಕುರಿತು ನನ್ನ ಬಾಸ್ ಬಗ್ಗೆ ಮಾತನಾಡಿದ್ದೀಯ ಅಂತ ಅವಾಚ್ಯ ಶಬ್ದಗಳಿಂದ ಬೈಯ್ಯು. ಅವರುಗಳ ಬಳಿ ಇದ್ದ ಡ್ರಾಗರ್ ಮತ್ತು ಚಾಕು ತೋರಿಸಿ ಚುಚ್ಚಲು ಮುಂದಾಗಿ ಭಯಪಡಿಸಿರುತ್ತಾರೆ. ಇವರು ನನ್ನ ಬಳಿ ಗಲಾಟೆ ಮಾಡುವಾಗ್ಗೆ ಜೈಲಿನಲ್ಲಿ ದರ್ಶನ್ ಜೊತೆ ಇದ್ದ ಬ್ಯಾರಕ್ ಫೋಟೋವನ್ನು ತೋರಿಸಿರುತ್ತಾರೆ.

ಆ ನಂತರ ಅಲ್ಲಿಂದ ಬಹಳ ಉಪಾಯದಿಂದ ಪ್ರಾಣವನ್ನು ಉಳಿಸಿಕೊಂಡು ಬಂದಿದ್ದೆ ದೊಡ್ಡ ವಿಚಾರವಾಗಿರುತ್ತದೆ. ಈ ವಿಚಾರವನ್ನು ನನ್ನ ಜೊತೆ ಇದ್ದ ನನ್ನ ಸ್ನೇಹಿತರಾದ ಮಹೇಶ್, ಪ್ರಮೋದ್, ಚಾಲಕ ಪ್ರಕಾಶ್ ಸಾಕ್ಷಿಯಾಗಿರುತ್ತಾರೆ.

ಆದ್ದರಿಂದ ಮೇಲ್ಕಂಡವರಿಂದ ನನಗೆ ಜೀವ ಭಯವಿರುವುದರಿಂದ ನನಗೆ ರಕ್ಷಣೆ ನೀಡಿ ಕಾನೂನು ಅಡಿಯಲ್ಲಿ ಅವರ ಮೇಲೆ ಕ್ರಮ ಜರುಗಿಸಬೇಕೆಂದು ಈ ಮೂಲಕ ಕೋರುತ್ತೇನೆ.

ನಾನು ಒಂದು ವಾರದಿಂದ ನನಗೆ ತೊಂದರೆ ಮಾಡಿದ್ದವರ ಬಗ್ಗೆ ಬುದ್ದಿ ಹೇಳಿಸಿ ರಾಜಿ ಆಗಲು ದರ್ಶನ್ ಆಪ್ತರು ಪ್ರಯತ್ನಿಸಿರುತ್ತಾರೆ. ಆದರೆ ಜುಲೈ. 28ರಿಂದ ಇಲ್ಲಿಯವರೆಗೂ ದರ್ಶನ್‌ರವರ ಅಧಿಕೃತ ಫ್ಯಾನ್ ಪೇಜಾದ ಡಿ ಡೈನಾಸ್ಟಿ, ಡಿ ಕಿಂಗ್‌ಡಮ್, ಡಿ ಯೂನಿವರ್ಸ್ ಮತ್ತು ಡೆವಿಲ್ ಕಿಂಗ್‌ಡಮ್ ಜೊತೆಗೆ 500 ಕ್ಕೂ ಹೆಚ್ಚು ಪೇಜ್‌ಗಳಿಂದ ನನ್ನ ವಯಕ್ತಿಕ ತೇಜೋವಧೆಗೆ ಇಳಿದಿರುತ್ತಾರೆ. ಆದ್ದರಿಂದ ಇವರುಗಳ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಬರೆದಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್ ಅವರ ಕುರಿತು ಪರೋಕ್ಷವಾಗಿ ಬೇಕಾಬಿಟ್ಟಿ ಮಾತನಾಡಿದ್ದಲ್ಲದೆ, ಸ್ಥಳಕ್ಕೆ ದರ್ಶನ್ ಬರಬೇಕು, ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಅವಹೇಳನ ಮಾಡದಂತೆ ಬುದ್ದಿ ಹೇಳಿ ಪೋಸ್ಟ್ ಮಾಡಬೇಕು, ಅಲ್ಲಿವರೆಗೂ ಅಮರಣಾಂತ ಉಪವಾಸ ಮಾಡುವೆ ಎಂದು ಹೇಳಿದವರು, ಯಾವುದೇ ಉಪವಾಸ ಸತ್ಯಾಗ್ರಹವನ್ನು ಮಾಡುವಂತೆ ಸ್ವಲ್ಪ ಸಮಯ ಕೂತು, ಮಾಧ್ಯಮಗಳಿಂದ ಪೋಟೋ, ವಿಡಿಯೋ ಆದ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ವರದಿಯಾಗಿದೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]