ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಬಳಿ ಸರ್ವೆ ಕಾರ್ಯ ನಿಲ್ಲಿಸಿ: ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ವಾರ್ನಿಂಗ್

Stop survey work near Doddaballapura Government Hospital

ದೊಡ್ಡಬಳ್ಳಾಪುರ: ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ (Hospital) ಆವರಣದ ಸರ್ವೆ ನಂ.28 ರಲ್ಲಿ ಹೆಚ್ಚುವರಿ ಆರೋಗ್ಯ ಸೌಲಭ್ಯಗಳನ್ನು ನಿರ್ಮಿಸುವ ಸಲುವಾಗಿ ಸರ್ವೆ ಮಾಡೊದನ್ನು ನಿಲ್ಲಿಸುವಂತೆ ಕನ್ನಡಿಗರ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ತಾಲೂಕು ಘಟಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆ ಆಡಳಿತ ಅಧಿಕಾರಿಗೆ ದೂರು ನೀಡಲಾಗಿದೆ.

ಈ ಕುರಿತಂತೆ ಮಾತನಾಡಿದ ಮುಖಂಡರು, ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆ ಆವರಣ ಸರ್ವೆ ನಂ.28 ರಲ್ಲಿ ಟೋಟಲ್ ಸ್ಪೇಷನ್ ಸರ್ವೆ ಮಾಡಿ ಹೆಚ್ಚುವರಿ ಆರೋಗ್ಯ ಸೌಲಭ್ಯಕ್ಕಾಗಿ 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆ 2ನೇ ಮಹಡಿಯಲ್ಲಿ 50 ಹಾಸಿಗೆಯ ಕ್ರಿಟಿಕಲ್ ಕೇರ್ ಕಟ್ಟಡ ನಿರ್ಮಿಸುವ ಸಲುವಾಗಿ ನಕ್ಷೆಗಳನ್ನು ತಯಾರಿಸಲು ಸರ್ವೆ ಮಾಡಲಾಗುತ್ತಿದೆ ಎಂದು ಗಮನಕ್ಕೆ ಬಂದಿದೆ.

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಬಳಿ ಸರ್ವೆ ಕಾರ್ಯ ನಿಲ್ಲಿಸಿ: ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ವಾರ್ನಿಂಗ್

ಈಗಾಗಲೇ ಸರ್ಕಾರಿ ಆದೇಶದ ಅನ್ವಯ ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 250 ಹಾಸಿಗೆಗಳಾಗಿ ಗ್ರಾಮೀಣ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ 2 ಹಂತಗಳಲ್ಲಿ ಮೊದಲನೇ ಹಂತ ರೂ.11,300.00 ಲಕ್ಷಗಳು 2ನೇ ಹಂತ 5,400,00 ಲಕ್ಷಗಳು ಒಟ್ಟಾರೆ 16,700.00 ಲಕ್ಷಗಳಿಗೆ ಅನುಮೋದನೆ ನೀಡಲಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕು, ಸಿದ್ದೇನಾಯಕನಹಳ್ಳಿ ಸರ್ವೆ ನಂ. 20 ರಲ್ಲಿ 9-38 ಎಕೆರೆ/ಗುಂಟೆ ಜಮೀನು ಗುರುತಿಸಿರುವ ನಿವೇಶನದಲ್ಲಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಿಲ್ಲಾಸ್ಪತ್ರೆಯ ಶಂಕು ಸ್ಥಾಪನೆ ಸಹ ನೇರವೇರಿಸಿದ್ದಾರೆ‌.

ಅದರಂತೆಯೇ ಕಾಮಗಾರಿಯ ಪ್ರಧಾನ ಮಂತ್ರಿ ಆಯುಷ್ಠಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಹಾಗೂ ಕರ್ನಾಟಕ ಸರ್ಕಾರ ಅಡಿಯಲ್ಲಿ ಅಂದಾಜು ಮೊತ್ತ ರೂ.2335.00 ಲಕ್ಷಗಳಿಗೆ ಆಡಳಿತಾತ್ಮಕ ಅನುಮೋದನೆ ಆಗಿರುತ್ತದೆ.

ಮುಖ್ಯ ಇಂಜಿನಿರ್ ರವರ ಕಛೇರಿಯ ತಾಂತ್ರಿಕ ಮಂಜೂರು ಮಾಡಿ ತಾಂತ್ರಿಕ ಮಂಜೂರಾತಿ ನೀಡಿರುತ್ತಾರೆ. ಇದರ ಬೆಳವಣಿಗೆಯ ಮಧ್ಯ ಜುಲೈ.14 ರಂದು ಕಾಮಗಾರಿಯನ್ನು ನಿಲ್ಲಿಸುವಂತೆ ಗುತ್ತಿಗೆದಾರರಿಗೆ ನೋಟಿಸ್ ನೀಡಲಾಗಿದೆ.

ಅಲ್ಲದೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ (ತಾಯಿ ಮಗು) ಆಸ್ಪತ್ರೆ ಸರ್ವೆ ನಂ.28 ರಲ್ಲಿ ಸರ್ವೆ ಮಾಡಿ 100 ಹಾಸಿಗೆಯ ಕಟ್ಟಡ ಅದರ ಮೇಲೆ ಕ್ರಿಟಿಕಲ್ ಕೇರ್ ಕಟ್ಟಡ ಕಟ್ಟಲು ಸರ್ವೆ ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಅನುಮಾನ ವ್ಯಕ್ತವಾಗುತ್ತಿದೆ.

ಸರ್ವೆ ನಂ.20 ರಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ನಿಲ್ಲಿಸಿ, ಇಲ್ಲಿ ಕಟ್ಟುವ ಉದ್ದೇಶವೇನು..? ಇದನ್ನು ಕರವೇಯು ಉಗ್ರವಾಗಿ ಖಂಡಿಸುತ್ತೇವೆ. ಹಾಗೂ ಇಲ್ಲಿ ಸರ್ವೆ ಮಾಡಿದರೆ ಸರ್ವೆಗೆ ಅಡ್ಡಿಪಡಿಸುವುದಲ್ಲದೇ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್‌ಎಲ್‌ಎನ್ ವೇಣು, ಉಪಾಧ್ಯಕ್ಷ ಜೋಗಹಳ್ಳಿ ಅಮ್ಮು, ಕಾರ್ಯದರ್ಶಿ ಮಂಜು, ಖಜಾಂಚಿ ಆನಂದ್, ನಗರಧ್ಯಕ್ಷ ಶ್ರೀನಗರ ಬಶೀರ್ ಇದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]