The Shivanna couple, who supported Ramya, are in trouble

ರಮ್ಯಾನ ಬೆಂಬಲಿಸಿದ ಶಿವಣ್ಣ ದಂಪತಿಗೆ ಇಕ್ಕಟ್ಟು.. ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ “ಎಲ್ಲಿದಪ್ಪ” ಎಂದು ಯುವ ಪತ್ನಿಯಿಂದ ತಿರುಗೇಟು..!

ಬೆಂಗಳೂರು: ನಟ ದರ್ಶನ್ (Darshan) ವಿಚಾರದ ಬಗ್ಗೆ ಮಾತನಾಡಿದ ನಂತರ ಮಾಜಿ ಸಂಸದೆ ರಮ್ಯಾ (Ramya) ಖಾಸಗಿ ಚಾನಲ್‌ಗಳಲ್ಲಿ ಸುದ್ದಿಯಾಗಿದ್ದಾರೆ

ಮತ್ತೊಂದೆಡೆ ಹಿರಿಯ ನಟ ಡಾ.ಶಿವಕುಮಾರ್ ದಂಪತಿ, ನಟ ಯುವ ರಾಜ್ ಕುಮಾರ್ ಅವರು ರಮ್ಯಾ ಪರ ಇರುವುದಾಗಿ ಮಾತನಾಡಿದ್ದಾರೆ.

ಇದರ ಬೆನ್ನಲ್ಲಿಯೇ ಯುವ ರಾಜ್‌ಕುಮಾರ್ ಅವರ ಪತ್ನಿ ಶ್ರೀದೇವಿ ಬೈರಪ್ಪ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯ ಮೂಲಕ ಮಾಧ್ಯಮಗಳಲ್ಲಿ ಮಹಿಳೆಯನ್ನು ಅವಮಾನಿಸುವುದರ ವಿರುದ್ಧ ಮಾತಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೆ ಸುಮ್ಮನೆ ಇದ್ರಲ್ಲ, ಆವಾಗ ನಿದ್ದೆ ಮಾಡ್ತಾ ಇದ್ರ ಎಲ್ಲಾ ??! ಎಂದು ಪ್ರಶ್ನೆ ಮಾಡಿದ್ದಾರೆ.

ನಟ ದರ್ಶನ್ ಅಭಿಮಾನಿಗಳು ಎನ್ನಲಾದ ಕೆಲವರು ರಮ್ಯಾ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿರುವಾಗ ರಮ್ಯಾಗೆ ಶಿವರಾಜ್‌ಕುಮಾರ್ ಬೆಂಬಲ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಅವರು, ‘ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ.

ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ. -ಇಂತೀ ಶಿವರಾಜ್‌ಕುಮಾ‌ರ್, ಗೀತಾ ಶಿವರಾಜ್‌ಕುಮಾ‌ರ್ ಎಂದು ಪೋಸ್ಟ್ ಒಂದನ್ನು ಹಾಕಿದ್ದರು.

ಆದರೆ, ಈ ಬಗ್ಗೆ ಶಿವರಾಜ್‌ಕುಮಾರ್ ಅವರ ತಮ್ಮ ರಾಘವೇಂದ್ರ ರಾಜ್‌ಕುಮಾರ್ ಅವರ ಮಗ ಯುವ ರಾಜ್‌ಕುಮಾರ್ ಅವರ ಪತ್ನಿ ಶ್ರೀದೇವಿ ಬೈರಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ದೊಡ್ಮನೆ ಕುಟುಂಬದ ನಡೆಯ ಬಗ್ಗೆಯೇ ಆಕ್ರೋಶ ಹೊರಹಾಕಿದ್ದಾರೆ.

ಯುವ ರಾಜ್‌ಕುಮಾರ್ ಅವರಿಂದ ನನಗೆ ಅನ್ಯಾಯ ಆಗಿದ್ದನ್ನು ಪ್ರಶ್ನೆ ಮಾಡಿದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ತಮ್ಮ ಕುಟುಂಬದಲ್ಲಿಯೇ ಮಹಿಳೆಗೆ ಅನ್ಯಾಯ ಆಗುತ್ತಿದ್ದರೂ, ಯಾರೊಬ್ಬರೂ ಮಾತನಾಡಲಿಲ್ಲ. ಒಬ್ಬ ಮಹಿಳೆಯನ್ನು ಅವಮಾನ ಮಾಡುವಾಗ ಎಲ್ಲರೂ ಸುಮ್ಮನಿದ್ರಿ ಎಂಬಂತೆ ಆಕ್ರೋಶ ಹೊರಹಾಕಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

“ಮಾಧ್ಯಮಗಳಲ್ಲಿ ಮಹಿಳೆಯನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲಾ ನಡೆಯುವಾಗ ಮಾತಾಡದೇ ಸುಮ್ಮನೆ ಇದ್ರಲ್ಲ. ಆವಾಗ ನಿದ್ದೆ ಮಾಡ್ತಾ ಇದ್ರಾ ಎಲ್ಲಾ?!” ಎಂದು ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ.

ಜೊತೆಗೆ ಹೇಳುವುದು ಒಂದು, ಮಾಡುವುದು ಇನ್ನೋಂದು ಎಂಬ ಗೀತೆಯೊಂದಿಗೆ, ಈ ಪೋಸ್ಟ್‌ನ ಕೊನೆಯಲ್ಲಿ #Hypocrites #Drama ಎಂಬ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿದ್ದಾರೆ.

ಅಲ್ಲದೆ ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಮಕ್ಕಳನ್ನು ಕೀಳಾಗಿ ಕಾಣೋ ಪ್ರಪಂಚ, ಬೆಳವಣಿಗೆಗೂ ಮುನ್ನ ನಾಶವಾಗಬೇಕು ಎಂದಿರುವ ಅವರು ನನಗೆ ಅನ್ಯಾಯ ಆದಾಗ “ಎಲ್ಲಿದಪ್ಪ” ಎಂಬಂತೆ ಅವರ ಆಕ್ರೋಶ ದೊಡ್ಮನೆ ಕುಟುಂಬದ ಶಿವರಾಜ್‌ಕುಮಾರ್ ದಂಪತಿಗೆ ಹೇಳಿರುವುದು ಎಂಬಂತೆ ಚರ್ಚೆ ಆಗುತ್ತಿದೆ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!