ಬೆಂ.ಗ್ರಾ.ಜಿಲ್ಲೆ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಪ್ರಥಮ ಬಿ.ವಿ.ಎ. ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ)ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ “ಯುಯುಸಿಎಂಎಸ್ ಪೋರ್ಟಲ್” ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ (Applications are invited).
ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನಾಂಕವಾಗಿರುತ್ತದೆ ಆಗಸ್ಟ್ 11 ಬೆಳಗ್ಗೆ 11-00 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 02-00 ಗಂಟೆಗೆ ವ್ಯಯಕ್ತಿಕ ಸಂದರ್ಶನ ನಡೆಸಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ http://www.mysore.nic.in ಮತ್ತು http://www.cavamysore.karnataka.gov.in ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಯನ್ನು ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.