Daily Astrology| Astrology

ದಿನ ಭವಿಷ್ಯ: ಈ ರಾಶಿಯವರು ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ

Astrology: ಬುಧವಾರ, ಜುಲೈ 30, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಮಕ್ಕಳು ನಿಮಗೆ ಸಹ ಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ. ನಿರ್ದಿಷ್ಟ ಗುರಿ ಯನ್ನು ತಲುಪಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಪ್ರತಿನಿತ್ಯ ಕಛೇರಿ ಓಡಾಟ ಇದ್ದದ್ದೇ. ಆದರೆ ಅವುಗಳ ಮಧ್ಯೆಯೇ ಜೀವಿಸಿ ಅವುಗಳನ್ನು ಮೆಟ್ಟಿ ನಿಲ್ಲುವುದೇ ಜೀವನದ ಆಟ. ಕೆಲಸ ಕಾರ್ಯಗಳು ಮಂದ ಪ್ರಗತಿಯಲ್ಲಿ ಸಾಗಿದರೂ ಗುರುವಿನ ಶುಭ ಸಂಚಾರದಿಂದಾಗಿ ಅಂತಿಮವಾಗಿ ಶುಭಫಲ ಕಾಣುವಿರಿ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ಮನಸ್ಸಿಗೆ ಬೇಡವಾದ ಘಟನೆಗಳು ಜರುಗುವುದರಿಂದ ಮಾನಸಿಕ ತಲ್ಲಣ ಉಂಟಾಗಬಹುದು, ಜಾಗರೂಕರಾಗಿರಿ. ನಿಮಗೆ ಹಣಕಾಸಿನ ನೆರವು ದೊರೆಯು ವುದು ಮತ್ತು ಕುಟುಂಬ ವರ್ಗದವರ ಸಹಕಾರವೂ ದೊರೆಯುವ ಯೋಗವಿದೆ. (ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇ ಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ದಿನ ನಿತ್ಯದ ಕೆಲಸಗಳು ಇದ್ದೇ ಇರುತ್ತದೆ. ಆದರೆ ನಿಮ್ಮ ವೈಯಕ್ತಿಕ ಕೆಲಸ ಕಾರ್ಯಗಳನ್ನು ಮಾಡಲು ಪ್ರಶಸ್ತವಲ್ಲ. ಜ್ಞಾನಕಾರಕ ಗುರುವನ್ನು ಆರಾಧಿಸುವುದ ರಿಂದ ಒಳಿತಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳಿಗೆ ಇದು ಸಕಾಲ ದಿನ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಸಾಮಾಜಿಕ ಕಾಳಜಿ ಯನ್ನು ಜನ ಕೊಂಡಾಡುವರು. ಹಣಕಾಸಿ ನ ಸ್ಥಿತಿ ಉತ್ತಮವಾಗಿರುತ್ತದೆ , ಕಿರಿಕಿರಿ ಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿರಾಶಾದಾಯಕ ನಡವಳಿಕೆ ಇಂದಾಗಿ ನೀವು ಯಾವುದೇ ಪ್ರಗತಿಯ ನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿಯನ್ನು ಕುಂಠಿತ ಗೊಳಿಸಿದೆಯಂದು ಕಂಡುಕೊಳ್ಳ ಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯ ಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ.(ಭಕ್ತಿಯಿಂದ ಶ್ರೀ ಕುಲ ದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಅಧಿಕ ಭಾವನೆಗಳು ನಿಮ್ಮ ದಿನವನ್ನು ನಾಶ ಮಾಡಬಹುದು. ವಿಶೇಷ ವಾಗಿ ನೀವು ನಿಮ್ಮ ಪ್ರೀತಿ ಪಾತ್ರರು ಇತರ ರೊಂದಿಗೆ ತುಂಬಾ ಸ್ನೇಹದಿಂದಿರುವುದ ನ್ನು ಕಂಡಾಗ, ಎಲ್ಲರಿಗೂ ಅಸೂಯೆ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ದೂರ ಸಂಚಾರದಿಂದ ದೇಹಾಯಾಸವಾದೀತು. ವೃತ್ತಿರಂಗದಲ್ಲಿ ಸಮಾಧಾನಕರವಲ್ಲದ ವಾತಾವರಣ. ವಿದ್ಯಾರ್ಥಿಗಳಿಗೆ ವಿದ್ಯಾ ಲಾಭ ಉತ್ಸಾಹ ತರಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ವಾದ ವಿವಾದಗಳಿಗೆ ಕಾರಣ ರಾಗದಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ, ಸಮಾಧಾನ ತರಲಿದೆ. ನಿಂತ ಕೆಲಸ ಕಾರ್ಯಗಳನ್ನು ಚಾಲನೆ ಗೊಳಿಸಿರಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಅಧಿಕ ಬಂಡವಾಳ ತೊಡಗಿಸಲು ಶತಪ್ರಯತ್ನ ನಡೆಸುತ್ತಿದ್ದೀರಿ. ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಬಹುದು. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಮೀನ ರಾಶಿ: ಅತಿಯಾದ ಉತ್ಸಾಹದಿಂದ ವೃತ್ತಿ ಜೀವನದಲ್ಲಿ ಹೊಸ ತಿರುವು. ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸ ಬಲ್ಲಿರಿ. ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು. ದೇವತಾ ದರ್ಶನ ಭಾಗ್ಯವಿದೆ. ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು.ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. (ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಷಷ್ಠಿ
ನಕ್ಷತ್ರ: ಹಸ್ತ ನಕ್ಷತ್ರ.

ರಾಹುಕಾಲ: 12:00PM ರಿಂದ 01:30PM
ಗುಳಿಕಕಾಲ: 10:30AM ರಿಂದ 12:00PM
ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!