Chiguru is a cultural celebration of child talents: Rangayana director Dr. Raju Talikoti

ಚಿಗುರು ಬಾಲ ಪ್ರತಿಭೆಗಳ ಸಾಂಸ್ಕೃತಿಕ ಸಂಭ್ರಮ: ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ

ಧಾರವಾಡ: ಚಿಗುರು ಅಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇಂದಿನ ಮಕ್ಕಳಲ್ಲಿನ ಪ್ರತಿಭೆ ಹೊರತರುವ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಧಾರವಾಡ ರಂಗಾಯಣ ನಿರ್ದೇಶಕರಾದ ಡಾ. ರಾಜು ತಾಳಿಕೋಟೆ (Dr. Raju Talikote) ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಧಾರವಾಡ ತಾಲ್ಲೂಕು ಕಲಕೇರಿ ಸಂಗೀತ ವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ವತಿಯಿಂದ ಚಿಗುರು ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ತಾವು ಕಲಿತ ಗದುಗಿನ ಪಂಚಾಕ್ಷರಿ ಗವಾಯಿಗಳ ಆಶ್ರಮದ ಮಾದರಿಯಂತೆ ಕಲಕೇರಿ ಸಂಗೀತ ವಿದ್ಯಾಲಯದ ಪಾಠಶಾಲೆಗಳು ಜರುಗುತ್ತಿರುವುದು ಬಹಳ ಖುಷಿ ತಂದಿದೆ. ಸಂಗೀತ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಪಂ.ಮಲ್ಲಿಕಾರ್ಜುನ ಮನಸೂರ, ಪಂ.ಬಸವರಾಜರಾಜಗುರು, ಡಾ.ಗಂಗೂಬಾಯಿ ಹಾನಗಲ್ ಅವರಂತೆ ಆಗಲಿ ಎಂದು ಹಾರೈಸಿದರು.

ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಅವರು ಮಾತನಾಡಿ, ಕನ್ನಡ ಮತ್ತು ಸಂಸ್ಕೃತ ಇಲಾಖೆಯು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಮಕ್ಕಳಲ್ಲಿನ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ಆಸಕ್ತಿ ವಹಿಸುವಂತೆ ಪ್ರೋತ್ಸಾಹ ನೀಡುವ ಕೆಲಸ ನಿರಂತರವಾಗಿ ಮಾಡುತ್ತಾ ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕಲಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭೀಮವ್ವ ಮರೇವಾಡ, ಉಪಾಧ್ಯಕ್ಷ ಮಂಜುನಾಥ ಇದ್ಲಿ, ಗ್ರಾಮ ಪಂಚಾಯತ್ ಸದಸ್ಯರು, ಕಲಕೇರಿ ಸಂಗೀತ ವಿದ್ಯಾಲಯದ ಕಾರ್ಯದರ್ಶಿ ಆ್ಯಡಮ್ ಉಡ್ವರ್ಡ್, ಹಿರಿಯ ರಂಗಭೂಮಿ ಕಲಾವಿದರಾದ ವೀರಣ್ಣ ಪತ್ತಾರ, ಪ್ರಭು ಹಂಚಿನಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲಕೇರಿ ಸಂಗೀತ ವಿದ್ಯಾಯಲದ ಕು.ಕೀರ್ತನಾ ನಾಯಕ್ ಮತ್ತು ವೃಂದದವರಿಂದ ಸುಗಮ ಸಂಗೀತ ನಡೆಸಿಕೊಟ್ಟರು.

ಕು.ತುಳಸಿ ಮೊಕಾಶಿ ಮತ್ತು ತಂಡದವರಿಂದ ಜಾನಪದ ಗೀತೆಗಳು, ಕು.ದೀನಾ ರಾಘವೇಂದ್ರ ಅರಿವೇಡ್ ಮತ್ತು ತಂಡದಿಂದ ಸಮೂಹ ನೃತ್ಯ ಹಾಗೂ ಕು.ಪ್ರಣವ್ ಕಾಳೇನವರ ಮತ್ತು ತಂಡದಿಂದ ನಾಟಕ ಹಾಗೂ ಕು.ನಮನ ಬಿ ಕಲೆಗಾರ ಮತ್ತು ವೃಂದದಿಂದ ಶಾಸ್ತ್ರೀಯ ಸಂಗೀತ ಗಾಯನ ಮತ್ತು ಕು.ಮನಸ್ವಿ ಎಚ್.ಜೆ ಅವರು, ಏಕಪತ್ರಾಭಿನಯ ಪ್ರದರ್ಶನ ನೀಡಿದರು.

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!