ಎಸ್.ನಾರಾಯಣ್ ಹೆಸರಲ್ಲಿ ನಕಲಿ ಖಾತೆ, ಅಶ್ಲೀಲ ಸಂದೇಶ; ಹೆಚ್ಚಾಯ್ತು ದರ್ಶನ್ ಅಭಿಮಾನಿಗಳ ಅನುಮಾನ

Fake account in S. Narayan's name, obscene message

ಬೆಂಗಳೂರು: ಮೊನ್ನೆಯಷ್ಟೇ ನಟ ದರ್ಶನ್ (Darshan) ಅಭಿಮಾನಿಗಳು ಎನ್ನಲಾಗುತ್ತಿರುವವರಿಂದ ಅಶ್ಲೀಲ ಮೆಸೇಜ್ ಮಾಡಿದ್ದಾರೆ ಎಂದು ಮಾಜಿ ಸಂಸದೆ ರಮ್ಯಾ (Ramya) ದೂರಿನ ಬೆನ್ನಲ್ಲೇ ನಿರ್ದೇಶಕ ಎಸ್.ನಾರಾಯಣ್ (S.Narayan) ಅವರ ಹೆಸರಲ್ಲಿ ನಕಲಿ ಖಾತೆ ಓಪನ್ ಮಾಡಿರುವ ಕಿಡಿಗೇಡಿಗಳು ಸ್ಟಾರ್ ನಟರಿಗೆ ಅವಹೇಳನ ಮಾಡಿ ಪೋಸ್ಟ್ ಮಾಡಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯ ಒತ್ತಡದಲ್ಲಿರುವ ನಟ ದರ್ಶನ್ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಲು ದರ್ಶನ್ ಅಭಿಮಾನಿಗಳ ಹೆಸರಲ್ಲಿ ವಿರೋಧಿಗಳು ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರಾ..? ಎಂಬ ಚರ್ಚೆ ಶುರುವಾಗಿದೆ.

ಸೋಶಿಯಲ್ ಮೀಡಿಯಾ (Social Media) ಯುಗದಲ್ಲಿ ನಕಲಿ ಖಾತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಪೊಲೀಸರು ಇದಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಂಡರೂ ಕಿಡಿಗೇಡಿಗಳ ಆಟಾಟೋಪ ಮಾತ್ರ ನಿಲ್ಲುತ್ತಿಲ್ಲ.

ಇದೀಗ ಕೆಲ ಕಿಡಿಗೇಡಿಗಳು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್. ನಾರಾಯಾಣ್ ಹೆಸರಿನಲ್ಲಿ ನಕಲಿ ಖಾತೆ ಓಪನ್ ಮಾಡಿದ್ದಾರೆ.

ನಿರ್ದೇಶಕ ಎಸ್.ನಾರಾಯಣ್ ಅವರ ಹೆಸರಲ್ಲಿ ನಕಲಿ ಖಾತೆ ಓಪನ್ ಮಾಡಿರುವ ಕಿಡಿಗೇಡಿಗಳು ಸ್ಟಾರ್ ನಟರಿಗೆ ಅವಹೇಳನ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಕುರಿತಂತೆ ಎಸ್. ನಾರಾಯಣ್ ಅವರು ಇಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಗೆ ದೂರು ನೀಡಿದ್ದಾರೆ.

ದೂರಿನಲ್ಲಿ ನಿರ್ದೇಶಕ ನಾರಾಯಣ್, S.Narayan@Snarayanofficia ಎಂಬ ನಕಲಿ ಖಾತೆ ಓಪನ್ ಮಾಡುವ ಮೂಲಕ ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಅಶ್ಲೀಲ ಸಂದೇಶಗಳು, ಕಾಮೆಂಟ್‌ಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಲಾಗುತ್ತಿದೆ, ಹಂಚಿಕೊಳ್ಳಲಾಗುತ್ತಿದೆ ಮತ್ತು ಫಾರ್ವಡ್ ಮಾಡಲಾಗುತ್ತಿದೆ.

ಅಲ್ಲದೇ ನನ್ನ ಸ್ನೇಹಿತರನ್ನು ಸಂಪರ್ಕಿಸಲಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ಮಾಡಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಪುನೀತ್, ಶಿವಣ್ಣ ಹಾಗೂ ಸುದೀಪ್ ಸೇರಿದಂತೆ ಹಲವು ನಟರ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ.

ಕಳೆದ ಆರೇಳು ತಿಂಗಳಿಂದ ಈ ರೀತಿ ಮೆಸೇಜ್ ಗಳನ್ನು ಮಾಡುತ್ತಿದ್ದಾರೆ. ಈ ವಿಚಾರ ನಾಲ್ಕು ದಿನಗಳ ಹಿಂದೆ ನನ್ನ ಗಮನಕ್ಕೆ ಬಂತು. ಹೀಗಾಗಿ ಕಿಡಿಗೇಡಿಗಳ ವಿರುದ್ಧ ದೂರು ನೀಡಲು ಬಂದಿದ್ದೇನೆ ಎಂದರು.

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡ ಚಿತ್ರರಂಗದಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುತ್ತಿರುವುದು ಕಳವಳಕಾರಿಯಾಗಿದೆ. ಎಲ್ಲರಿಗೂ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಆದರೆ ಈ ವಾಕ್ ಸ್ವಾತಂತ್ರ್ಯ ಹೆಸರಿನಲ್ಲಿ ಲಿಮಿಟ್ ಮೀರಿ ಟ್ರೋಲ್ ಮಾಡುತ್ತಿದ್ದಾರೆ. ಇದು ಕನ್ನಡ ಚಿತ್ರರಂಗ ಅಭ್ಯುದಯಕ್ಕೆ ಮಾರಕವಾಗಿದೆ. ನಾನು ಎಲ್ಲಾ ನಟರೊಂದಿಗೆ ಚೆನ್ನಾಗಿದ್ದೇನೆ. ಈ ರೀತಿಯ ಕೆಲಸ ಯಾರು ಮಾಡಿದ್ದಾರೋ ಗೊತ್ತಿಲ್ಲ ಎಂದು ಎಸ್ ನಾರಾಯಣ್ ಹೇಳಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆಗಳು ಮುಗಿದ ಕ್ಷಣ, ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹993 ರಷ್ಟು ಹೆಚ್ಚಿಸಲಾಗಿದೆ, ಚುನಾವಣಾ

[ccc_my_favorite_select_button post_id="121599"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]