Allegations of election irregularities; If Congress has evidence, submit it to the court: B.Y. Vijayendra

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಬೆಂಗಳೂರು: ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಾಗದೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಅಕ್ರಮದ ಹೊಸ ಕಪಟ ನಾಟಕ ಮಾಡುತ್ತಿದೆ. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಆಗಸ್ಟ್ 4 ಅಥವಾ 5ರಂದು ಬೆಂಗಳೂರಿಗೆ ಬಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ; ಪಾದಯಾತ್ರೆ ಅಥವಾ ಧರಣಿ ಮಾಡುತ್ತಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ನಡವಳಿಕೆ ಗಮನಿಸಿದರೆ ಅಯ್ಯೋ ಪಾಪ ಅನಿಸುತ್ತದೆ ಎಂದು ಟೀಕಿಸಿದರು.

ಚುನಾವಣಾ ಆಯೋಗದ ಬಗ್ಗೆಯೂ ಅನುಮಾನ, ಸುಪ್ರೀಂ ಕೋರ್ಟಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸುತ್ತಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಳಿ ಪುರಾವೆ ಇದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದರು.

ನೀವು ಅದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಿ ಎಂದು ಆಗ್ರಹಿಸಿದರು.
ಹೇಗಾದರೂ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದು ಕಾಂಗ್ರೆಸ್ ಪ್ರಯತ್ನ ಮಾಡಿತ್ತು. ಆದರೆ, ಗೆಲುವು ಸಾಧ್ಯವಾಗಿಲ್ಲ ಎಂದ ಅವರು, ಆರೋಪದಿಂದ ಅವರು ಏನೂ ಸಾಧನೆ ಮಾಡಲು ಸಾಧ್ಯವಾಗದು ಎಂದು ತಿಳಿಸಿದರು.

ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದರೆ ನಾವು (ಬಿಜೆಪಿ) ಕರ್ನಾಟಕದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುವ ಅವಶ್ಯಕತೆ ಇರಲಿಲ್ಲ ಎಂದು ಅವರು ತಿಳಿಸಿದರು. ಕಾಂಗ್ರೆಸ್ 66 ಶಾಸಕ ಸ್ಥಾನ ಪಡೆದರೆ, ಬಿಜೆಪಿ 136 ಸ್ಥಾನದಿಂದ ಅಧಿಕಾರಕ್ಕೆ ಏರುತ್ತಿತ್ತು ಎಂದು ವಿಶ್ಲೇಷಿಸಿದರು.

ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ಅಪಾಯಕಾರಿ ಬೆಳವಣಿಗೆ

3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಗೆಲ್ಲುತ್ತಿತ್ತು. ಹಾಗಿದ್ದರೆ ಮೂರರಲ್ಲೂ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಪ್ರಶ್ನಿಸಿದರು. ಇದು ಮೂರ್ಖತನದ ಪರಮಾವಧಿ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷ ಮೂರ್ಖರ ಪಕ್ಷವಾಗಿದೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿವೆ. ಹಾಗಿದ್ದರೆ ರಾಯಚೂರು, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಕೇಳಿದರು. ಈ ರೀತಿ ಹುಚ್ಚಾಟ, ರಂಪಾಟದ ಮೂಲಕ ಸಾಂವಿಧಾನಿಕ ಸಂಸ್ಥೆ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸುವುದು ಅಪಾಯಕಾರಿ ಬೆಳವಣಿಗೆ; ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪಿಸಿದರು.

4 ಅಥವಾ 5ರಂದು ಅವರು ಬಂದು ಏನು ಕಡಿದು ಕಟ್ಟೆ ಹಾಕುತ್ತಾರೆಂದು ಬಿಜೆಪಿ ನೋಡುತ್ತದೆ ಎಂದರು. ನಾವು ಕೂಡ ಕಾರ್ಯತಂತ್ರ ರೂಪಿಸುತ್ತೇವೆ ಎಂದು ತಿಳಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ, ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆಗೆ ಮುಂದಾದರೆ ಕಮೀಷನರ್ ಅವರು ಹೈಕೋರ್ಟಿನ ಆದೇಶ ತೋರಿಸುತ್ತಾರೆ. ಸಿದ್ದರಾಮಯ್ಯನವರು ಎಲ್ಲಿಂದ ಬೇಕಿದ್ದರೂ ಪಾದಯಾತ್ರೆ ಮಾಡಬಹುದು, ರಾಹುಲ್ ಗಾಂಧಿಯವರು ಮೆರವಣಿಗೆ ಮಾಡಬಹುದು; ಇದು ಖಂಡಿತ ಸರಿಯಲ್ಲ ಎಂದು ಟೀಕಿಸಿದರು.

ನಮಗೊಂದು ಕಾನೂನು, ಅವರಿಗೊಂದು ಕಾನೂನು ಇರಲು ಸಾಧ್ಯವಿಲ್ಲ ಎಂದರು. ಅವರಿಗೆ ಅವಕಾಶ ನೀಡಿದರೆ ನಾವೂ ಹೋರಾಟ ಮಾಡುತ್ತೇವೆ. ಅದನ್ನು ತಡೆಯಬಾರದು ಎಂದು ನುಡಿದರು.

ದಿಕ್ಕು ತೋಚದ ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರು ಹತಾಶರಾಗಿದ್ದಾರೆ. ಅವರಿಗೆ ದಿಕ್ಕು ತೋಚುತ್ತಿಲ್ಲ. ಒಂದೆಡೆ ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಬೀದಿಗೆ ಬಂದಿದ್ದಾರೆ. ಜಾಮೀನಿನಲ್ಲಿ ಅವರಿದ್ದಾರೆ. ದೇಶದ ಯಾವುದೇ ರಾಜ್ಯಕ್ಕೆ ಹೋದರೂ ಅವರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಇಲ್ಲಿ ಬಂದು ಪುಂಗಿ ಊದುವ ಕೆಲಸ ಮಾಡುತ್ತಾರೆ. ಅವರು ಬರಲಿ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಿದ್ದರಾಮಯ್ಯ ಅವರು ಶಾಸಕರ ಸಭೆಗೆ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ಕೊಡದ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಡುವೆ ನಾವು ವ್ಯತ್ಯಾಸ ಕಾಣುತ್ತಿದ್ದೇವೆ. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಲ್ಲ; ಸಿದ್ದರಾಮಯ್ಯನವರ ಸಾಧನಾ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಅವರು ಯಾವ ರೀತಿ ಏಕಾಂಗಿಯಾಗಿ ವೇದಿಕೆ ಬಿಟ್ಟು ನಡೆದು ಹೋದುದನ್ನು ನೋಡಿದ್ದೀರಿ. ರಾತ್ರೋರಾತ್ರಿ ದೆಹಲಿಗೆ ಹೋದರು. ಒಟ್ಟಾರೆಯಾಗಿ ಆಡಳಿತ ಪಕ್ಷದಲ್ಲಿ ಶಾಸಕರ ಮಧ್ಯೆ ಇರುವ ವ್ಯತ್ಯಾಸ ಕಾಣಿಸುತ್ತಿದೆ. ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸ ಕಳೆದುಹೋಗಿದೆ; ಮುಖ್ಯಮಂತ್ರಿಗಳೂ ವಿಚಲಿತರಾಗಿ ಮತ್ತೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕರ್ನಾಟಕದಲ್ಲಿ ದೀಪಾವಳಿ ಧಮಾಕಾ

50 ಕೋಟಿ ಅನುದಾನ ಎಲ್ಲಿ ಬಿಡುಗಡೆ ಮಾಡಿದ್ದಾರೆ ಸ್ವಾಮೀ? ಸಿದ್ದರಾಮಯ್ಯ ಅವರು ಹೇಳಿಕೆ ನೀಡಿ ಒಂದು ವಾರ ಕಳೆಯುತ್ತ ಬಂದಿದೆ. ಆಡಳಿತ ಪಕ್ಷದ ಶಾಸಕರಿಗೆ ಇವತ್ತಿಗೆ ಕೂಡ ಎಲ್ಲಿಯೂ ಅನುದಾನ ಬಿಡುಗಡೆ ಆಗಿಲ್ಲ ಎಂದು ಟೀಕಿಸಿದರು.

ವಿಪಕ್ಷದ ಶಾಸಕರಿಗೆ 25 ಕೋಟಿ ಎಂಬ ಊಹಾಪೋಹವಿದ್ದು, ಅದನ್ನೂ ಕೊಟ್ಟಿಲ್ಲ. ಒಟ್ಟಾರೆಯಾಗಿ ಮುಂದಿನ ದೀಪಾವಳಿ ಧಮಾಕಾ ಕರ್ನಾಟಕದಲ್ಲಿ ಆಗುವುದು ಸತ್ಯ ಎಂದು ತಿಳಿಸಿದರು. ರಷ್ಯಾ- ಉಕ್ರೇನ್ ಯುದ್ಧ ನಿಲ್ಲಬಹುದು; ಇಲ್ಲಂತೂ ಯುದ್ಧ ಪ್ರಾರಂಭ ಆಗಲಿದೆ ಎಂದು ನುಡಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!