ಬಲರಾಂಪುರ: ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕರೋರ್ವರು (Teacher) “ಇಲೆವೆನ್” (11) ಮತ್ತು “ನೈನ್‌ಟೀನ್” (19) ನಂತಹ ಮೂಲ ಇಂಗ್ಲಿಷ್ ಪದಗಳನ್ನು ಉಚ್ಚರಿಸಲು ತಿಣುಕಾಡಿರುವ ವಿಡಿಯೋ ವೈರಲ್ ಆಗಿದೆ.
ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಿಸಲಾದ ಈ ವೀಡಿಯೊ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಸ್ಥಿತಿಯ ಬಗ್ಗೆ ರಾಷ್ಟ್ರವ್ಯಾಪಿ ಕಳವಳವನ್ನು ಹುಟ್ಟುಹಾಕಿದೆ.
ಸಿಬ್ಬಂದಿಗೆ ಉನ್ನತ ಸರ್ಕಾರಿ ಅಧಿಕಾರಿಗಳ ಹೆಸರು ಹೇಳಲು ಅಥವಾ ಮೂಲಭೂತ ಸಾಮಾನ್ಯ ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದಿರುವುದು ಹೆಚ್ಚು ಕಳವಳಕಾರಿಯಾಗಿದೆ.
ಜಿಲ್ಲಾ ಶಿಕ್ಷಣ ಅಧಿಕಾರಿ (DEO) ತನಿಖೆಗೆ ಭರವಸೆ ನೀಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ.
ಶಿಕ್ಷಕರು ಮೂಲ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ
ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಇಬ್ಬರು ಶಿಕ್ಷಕರು ಸರಳ ಇಂಗ್ಲಿಷ್ ಪದಗಳನ್ನು ಬರೆಯಲು ಅಥವಾ ಉಚ್ಚರಿಸಲು ಸಾಧ್ಯವಾಗಲಿಲ್ಲ. ಅವರು ಪ್ರಧಾನಿ, ಮುಖ್ಯಮಂತ್ರಿ ಅಥವಾ ಜಿಲ್ಲಾಧಿಕಾರಿಯನ್ನು ಸಹ ಹೆಸರಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ
ವೈರಲ್ ಆಗಿರುವ ವೈರಲ್ ಸಾರ್ವಜನಿಕ ವಲಯದಲ್ಲಿ ಕಳವಳವನ್ನು ಹುಟ್ಟುಹಾಕಿದೆ.
ಈ ವೀಡಿಯೊ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ತರಬೇತಿ ಮತ್ತು ಹೊಣೆಗಾರಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೋಧನಾ ಸಿಬ್ಬಂದಿಯಲ್ಲಿ ಮೂಲಭೂತ ಜ್ಞಾನದ ಕೊರತೆಯ ಬಗ್ಗೆ ಶಿಕ್ಷಣ ತಜ್ಞರು ಮತ್ತು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇದು ಸಾಮಾನ್ಯ ಘಟನೆ ಎನಿಸಿದರು, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯನ್ನು ಪ್ರತಿಬಿಂಬಿಸುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.