Make farmers aware of crop insurance: A.B. Basavaraju

ಬೆಳೆ ವಿಮೆ ಮಾಡಿಸಲು ರೈತರಿಗೆ ಅರಿವು ಮೂಡಿಸಿ: ಎ.ಬಿ ಬಸವರಾಜು

ಬೆಂ.ಗ್ರಾ.ಜಿಲ್ಲೆ: ಅತಿವೃಷ್ಟಿ ಅನಾವೃಷ್ಟಿ, ಹವಾಮಾನ ಬದಲಾವಣೆ ಮುಂತಾದ ಪ್ರಕೃತಿ ವಿಕೋಪಗಳಿಂದ ಸಂಭವಿಸುವ ಬೆಳೆ ನಷ್ಟಕ್ಕೆ ವಿಮೆ ಸಹಕಾರಿ ಆಗಲಿದ್ದು ಬೆಳೆ ವಿಮೆ (Crop insurance) ಮಾಡಿಸಿಕೊಳ್ಳಲು ರೈತರಿಗೆ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು

ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ ಮುಂತಾದ ಪ್ರಕೃತಿ ವಿಪತ್ತಿನಿಂದ ಬೆಳೆ ನಾಶವಾಗಿ ನಷ್ಟವಾಗುತ್ತದೆ. ಬೆಳೆಯನ್ನೆ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಈ ನಷ್ಟ ಭರಿಸಲು ಸಾಧ್ಯವಾಗುವುದಿಲ್ಲ ಹಾಗಾಗಿ ಬೆಳೆ ವಿಮೆಯ ಅವಶ್ಯಕತೆಯನ್ನು ರೈತರಿಗೆ ಮನದಟ್ಟು ಮಾಡಬೇಕು ಎಂದರು.

ಜಿಲ್ಲೆಯಲ್ಲಿನ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ ಮತ್ತು ಮಾವುಗೆ ವಿಮೆ ಕಲ್ಪಿಸಲಾಗಿದ್ದು. ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80000 ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ 4,000 ರೂಗಳು ಮಾತ್ರ ವಿಮೆ ಪಾವತಿ ಮಾಡಬೇಕು. ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ 2.80.000 ರೂ ವಿಮಾ ಮೊತ್ತ ಸಿಗಲಿದ್ದು, ರೈತರು ಪ್ರತಿ ಹೆಕ್ಟೇರಿಗೆ ಶೇ 5 ರಂತೆ 14,000 ರೂಂ ವಿಮೆ ಪಾವತಿ ಮಾಡಬೇಕು ಎಂದರು.

ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸಬಹುದು ಜೊತೆಗೆ ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ನೋಂದಣಿಯ ಅಂತಿಮ ದಿನಾಂಕ ಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸ ಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿಯು ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ. ವಿಮೆ ಮಾಡಿಸುವ ರೈತರು ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿಯನ್ನು ಸಂಪರ್ಕಿಸಬಹುದು. ಅಧಿಕಾರಿಗಳು ಕೂಡ ತಾಲ್ಲೂಕು ವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ರೈತರಿಗೆ ವಿಮೆ ಸೌಲಭ್ಯದ ಬಗ್ಗೆ ಅರಿವು ಮೂಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶಿವಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಗುಣವಂತ, ಜಂಟಿ ಕೃಷಿ ನಿರ್ದೇಶಕರಾದ ಕಲಾವತಿ ಬಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!