Congress introduced irregularities in the elections: Opposition Leader R. Ashoka

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ಕೋರ್ಟ್‌ನಲ್ಲಿ ಸಾಬೀತಾಗಿತ್ತು. ರಾಹುಲ್‌ ಗಾಂಧಿ ಆಗಸ್ಟ್‌ 5 ಕ್ಕೆ ರಾಜ್ಯಕ್ಕೆ ಬರುವುದೇ ದೊಡ್ಡ ನಾಟಕ. ಇಲ್ಲಿ ಸರ್ಕಾರ ನಡೆಯುತ್ತಿಲ್ಲ. ಅದರ ಬದಲು ಸಿಎಂ ಕುರ್ಚಿಗಾಗಿ ಕಲಹ ನಡೆಯುತ್ತಿದೆ. ಅದನ್ನು ಮರೆಮಾಚಲು ಚುನಾವಣಾ ಅಕ್ರಮದ ವಿಷಯ ಪ್ರಸ್ತಾಪ ಮಾಡಲಾಗಿದೆ ಎಂದರು.

ಚುನಾವಣೆ ನಡೆದಾಗ ನ್ಯಾಯಾಲಯದ ಮೊರೆ ಹೋಗದೆ ಇಷ್ಟು ವರ್ಷವಾದ ಬಳಿಕ ಆರೋಪ ಮಾಡಲಾಗುತ್ತಿದೆ. ಅಭಿವೃದ್ಧಿ ಶೂನ್ಯತೆಯನ್ನು ಮರೆಮಾಚಲು ಈ ರೀತಿ ಮಾಡಲಾಗುತ್ತಿದೆ. ಸಾಕ್ಷಿ ಇದ್ದರೆ ನ್ಯಾಯಾಲಯದ ಮೊರೆ ಹೋಗುತ್ತಿದ್ದರು. ಸಾಕ್ಷಿ ಇಲ್ಲವೆಂದೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಇಂತಹ ಅಧಿಕಾರಿ ಮಾಡಿದ್ದಾರೆ ಎಂದು ನಿರ್ದಿಷ್ಟವಾಗಿ ತಿಳಿಸಲಿ ಎಂದರು.

ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಪ್ರಕರಣ ಸದನದಲ್ಲಿ ಗದ್ದಲ ಸೃಷ್ಟಿಸಿತ್ತು. ಈಗ ಈ ಘಟನೆ ನಡೆದೇ ಇಲ್ಲ ಎಂದು ಕಾಂಗ್ರೆಸ್‌ ಸರ್ಕಾರ ವರದಿ ನೀಡಿದೆ. ಸಚಿವರ ಮಾತಿಗೆ ಬೆಲೆ ಇಲ್ಲವಾಗಿದೆ. ಸಚಿವರು ಏನೇ ಮಾತಾಡಿದರೂ ಅದು ಸರ್ಕಾರದ ಮಾತಾಗುತ್ತದೆ. ಅಂತಹವರ ಹೇಳಿಕೆಯನ್ನು ವಾಷಿಂಗ್‌ ಮೆಶಿನ್‌ಗೆ ಹಾಕಿ ಸ್ವಚ್ಛ ಮಾಡಲಾಗಿದೆ. ಪೊಲೀಸರ ಮೇಲೆ ಯಾರ ಒತ್ತಡವಿದೆ ಎಂದು ಗೊತ್ತಾಗಿಲ್ಲ. ಅವ್ಯವಹಾರಗಳನ್ನು ಈ ಸರ್ಕಾರ ಮುಚ್ಚಿಹಾಕುತ್ತದೆ. ಸಚಿವರಿಗೇ ನ್ಯಾಯ ಸಿಕ್ಕಲ್ಲ ಎಂದಾದರೆ ಬಡಜನರ ಪಾಡೇನು ಎಂದು ಪ್ರಶ್ನಿಸಿದರು.

ಡ್ರಗ್ಸ್‌ ಮಾಫಿಯಾ

ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ಬೆಳೆದಿದೆ. ಇದಕ್ಕೆ ಸರ್ಕಾರವೇ ಕಾರಣ. ಗೃಹ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇವೆಲ್ಲದರ ಪರಿಣಾಮವಾಗಿ ಇಂತಹ ಘಟನೆ ನಡೆದಿದೆ. ಮಹಾರಾಷ್ಟ್ರದ ಪೊಲೀಸರು ಇಲ್ಲಿಗೆ ಬಂದು ಬಂಧನ ಮಾಡುವುದು ನಮ್ಮ ಪೊಲೀಸರಿಗೆ ಅಪಮಾನವಾಗಿದೆ. ಈ ಹಿಂದೆ ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತವಾದಾಗ ಇಡೀ ಪೊಲೀಸ್‌ ಇಲಾಖೆಯ ಮೇಲೆ ತಪ್ಪು ಹೊರಿಸಲಾಯಿತು. ಇದರಿಂದಾಗಿ ಪೊಲೀಸರ ನೈತಿಕ ಸ್ಥೈರ್ಯ ಕುಸಿದಿದೆ. ಡ್ರಗ್ಸ್‌ ಮಾಫಿಯಾವನ್ನು ಎನ್‌ಐಎ ತನಿಖೆಗೆ ನೀಡಲಿ ಎಂದರು.

ಮೈಸೂರಿನ ರಿಂಗ್‌ ರಸ್ತೆಯಲ್ಲಿ ಪೊಲೀಸರು ಸದಾ ಓಡಾಡುತ್ತಾರೆ. ಆದರೂ ಈ ಘಟನೆ ತಿಳಿದುಬಂದಿಲ್ಲ. ಏಕೆಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲ ಎಂದರು.

ಪ್ರತಿ ತಿಂಗಳು ರಾಜ್ಯಕ್ಕೆ ಎಷ್ಟು ರಸಗೊಬ್ಬರ ಬಂದಿದೆ? ದಾಸ್ತಾನು ಎಷ್ಟಿದೆ? ಯಾವ ಜಿಲ್ಲೆಯಲ್ಲಿ ಎಷ್ಟು ನಿಗದಿ ಮಾಡಲಾಗಿದೆ? ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಲಿ. ದಾಸ್ತಾನಿರುವ ರಸಗೊಬ್ಬರವನ್ನು ರೈತರಿಗೆ ತಲುಪಿಸದೆ ಸರ್ಕಾರ ದಲ್ಲಾಳಿಗಳಲ್ಲಿ ಕೈಯಲ್ಲಿ ಸಿಕ್ಕಿಹಾಕಿಕೊಂಡಿದೆ. ಇಷ್ಟು ಸಾಮಾನ್ಯ ಪ್ರಜ್ಞೆ ಸರ್ಕಾರಕ್ಕೆ ಇಲ್ಲ. ಕೇಂದ್ರ ಸರ್ಕಾರ ರಸಗೊಬ್ಬರ ಕೊಟ್ಟಿದೆ. ಆದರೆ ಅದನ್ನು ರಾಜ್ಯ ಸರ್ಕಾರ ಸರಿಯಾಗಿ ರೈತರಿಗೆ ವಿತರಿಸಿಲ್ಲ. ಮಳೆ ಬರುವುದಕ್ಕೆ ತಕ್ಕಂತೆ ಸರ್ಕಾರ ಸಿದ್ಧವಾಗಿರಬೇಕು. ರಸಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಮುಂಚಿತವಾಗಿ ಸಭೆ ನಡೆಸಲಾಗಿದೆಯೇ? ಈ ಬಗ್ಗೆ ಪೂರ್ವಸಿದ್ಧತೆಯನ್ನು ಮಾಡಿಯೇ ಇಲ್ಲ ಎಂದರು.

ಮಾಲೆಂಗಾವ್‌ ಸ್ಫೋಟ ಪ್ರಕರಣವನ್ನು ಹಿಂದೂಗಳ ಮೇಲೆ ಹೇರಿ, ಹಿಂದೂ ಭಯೋತ್ಪಾದನೆ ಎಂಬ ಪದವನ್ನು ಕಾಂಗ್ರೆಸ್‌ ಸರ್ಕಾರ ಹುಟ್ಟುಹಾಕಿತ್ತು. ಸಾಧ್ವಿ ಪ್ರಜ್ಞಾ ಸಿಂಗ್‌ ಮತ್ತು ಇತರರ ವಿರುದ್ಧ ಎನ್‌ಐಎ ತನಿಖೆ ಮಾಡಲಾಗಿತ್ತು. ಈಗ ಬಂದಿರುವ ತೀರ್ಪಿನಲ್ಲಿ ಎಲ್ಲರೂ ಕಳಂಕರಹಿತರಾಗಿದ್ದಾರೆ. ಹಿಂದೂಗಳನ್ನು ಭಯೋತ್ಪಾದಕರಾಗಿ ಬಿಂಬಿಸಿ ಮುಸ್ಲಿಮರನ್ನು ಓಲೈಸುವ ಕಾಂಗ್ರೆಸ್‌ಗೆ ಮುಖಭಂಗವಾಗಿದೆ.

ರಾಜಕೀಯ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (H.D. Deve Gowda)

[ccc_my_favorite_select_button post_id="111998"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!