ಗಾಜನೂರು: ವರನಟ ಡಾ.ರಾಜಕುಮಾರ್ (Dr. Rajkumar’s) ಅವರ ಸಹೋದರಿ ನಾಗಮ್ಮ ಅವರು ತಮಿಳುನಾಡಿನ ತಾಳವಾಡಿ ತಾಲ್ಲೂಕಿನ ದೊಡ್ಡ ಗಾಜನೂರಿನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಮೃತರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಗಮ್ಮನವರು ಕುಟುಂಬದ ಸದಸ್ಯರೊಟ್ಟಿಗೆ ತೋಟದ ಮನೆಯಲ್ಲಿ ವಾಸವಿದ್ದರು.
ಮೃತರಿಗೆ ಐವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.