H.D. Deve Gowda expresses strong anger against Donald Trump

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಬೆಂಗಳೂರು: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿಗಳು, ಟ್ರಂಪ್‌ ಅವರ ವರ್ತನೆ, ಭಾಷೆ ಅವರ ಹೇಳಿಕೆಯ ಇನ್ನಿತರ ಅಂಶಗಳ ಬಗ್ಗೆ ಅತೀವ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿಗಳ ಹೇಳಿಕೆ ಪೂರ್ಣಪಾಠ ಇಲ್ಲಿದೆ

ಭಾರತದಲ್ಲಿ ಒಬ್ಬ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತನ್ನ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಿದ್ದಾನೆ. ಈ ಮೂಲಕ ಟ್ರಂಪ್‌ ಅವರಿಗೆ ಅನೇಕ ಪಾಠಗಳನ್ನು ಕಲಿಸಬಹುದು.

ಎಲ್ಲರಂತೆ ನಾನು ಕೂಡ ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಧಾರ ರಹಿತ ಮತ್ತು ಕೋಪದ ಹೇಳಿಕೆಗಳಿಂದ ಆಶ್ಚರ್ಯಚಕಿತನಾಗಿದ್ದೇನೆ. ಆಧುನಿಕ ಇತಿಹಾಸದಲ್ಲಿ ಇಷ್ಟೊಂದು ಅಸ್ಥಿರ, ಅನಾಗರಿಕ ಮತ್ತು ಬೇಜವಾಬ್ದಾರಿಯುತ ರಾಷ್ಟ್ರಮುಖ್ಯಸ್ಥರನ್ನು ನಾನು ಕಂಡಿಲ್ಲ ಎಂದು ನಾನು ಭಾವಿಸುತ್ತೇನೆ.

ಟ್ರಂಪ್ ಅವರು ಭಾರತದೊಂದಿಗೆ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರತೀ ದೇಶದೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ತಮ್ಮ ದೀರ್ಘಕಾಲದ ಮಿತ್ರರಾಷ್ಟ್ರಗಳನ್ನು ಸಹ ಬಿಟ್ಟಿಲ್ಲ. ಅವರಲ್ಲಿ ಮೂಲಭೂತವಾಗಿ ಏನೋ ಸಮಸ್ಯೆ ಇದೆ. ರಾಜತಾಂತ್ರಿಕತೆ ಅಥವಾ ರಾಜಕೀಯದ ಮೂಲಕ ಅದನ್ನು ಪತ್ತೆ ಹಚ್ಚಲು ಅಥವಾ ಪರಿಹರಿಸಲು ಸಾಧ್ಯವಿಲ್ಲ. ಅವರ ಕೋಪದ ಸ್ವಭಾವದ ಬಗ್ಗೆ ಇದಕ್ಕಿಂತ ಹೆಚ್ಚಿಗೆ ಹೇಳುವುದು ಸರಿಯಲ್ಲ. ಏಕೆಂದರೆ, ಅದು ನಮ್ಮ ತತ್ವಾದರ್ಶಗಳಿಗೆ, ಬದ್ಧತೆ ಕಡಿಮೆ ಎನಿಸುತ್ತದೆ.

ಭಾರತದ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತಮ್ಮ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಾ ಟ್ರಂಪ್‌ಗೆ ಅನೇಕ ಪಾಠಗಳನ್ನು ಕಲಿಸಬಹುದು ಎಂದು ನಾನು ಬಲವಾಗಿ ನಂಬಿದ್ದೇನೆ.

ಭಾರತವು ವೈವಿಧ್ಯಮಯ ಮತ್ತು ಪ್ರಜಾಪ್ರಭುತ್ವವಾದಿ ಸಾರ್ವಭೌಮ ರಾಷ್ಟ್ರ. ಸ್ವಾತಂತ್ರ್ಯದ ನಂತರ ಅದು ಯಾವಾಗಲೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಭಾರತವು ತನ್ನ ದಾರಿಗೆ ಎದುರಾಗುವ ಎಲ್ಲಾ ತೊಂದರೆಗಳನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಂಡು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ದೇವರು ಕರುಣಿಸಿರುವ ಸಾಮರ್ಥ್ಯ ಮತ್ತು ಶಕ್ತಿಯನ್ನು ಹೊಂದಿದೆ ಎಂಬುದು ನನ್ನ ಭಾವನೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ರಾಜಿ ಮಾಡಿಕೊಂಡಿಲ್ಲ ಎಂಬ ಬಗ್ಗೆ ನನಗೆ ಅತೀವ ಸಂತೋಷ ಮತ್ತು ಹೆಮ್ಮೆ ಇದೆ. ಟ್ರಂಪ್ ಅವರ ಬೆದರಿಕೆಗೆ ಭಾರತ ಹೆದರುವುದಿಲ್ಲ ಮತ್ತು ಅಂಥ ಬೆದರಿಕೆಗಳಿಂದ ಭಾರತ ಎಂದಿಗೂ ಇನ್ನೊಬ್ಬರ ತಾಳಕ್ಕೆ ತಕ್ಕಂತೆ ನಡೆಯುವುದಿಲ್ಲ ಎಂದು ಈಗಾಗಲೇ ತೋರಿಸಿಕೊಟ್ಟಿದೆ.

ಇದಕ್ಕೆ ವಿರುದ್ಧವಾಗಿ ರಾಷ್ಟ್ರದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ ಅವಲಂಬಿಸಿರುವ ಕೃಷಿ ವಲಯ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಸಂರಕ್ಷಿಸಲು ಮೋದಿ ಅವರ ಸರಕಾರವು ಪರಿಪೂರ್ಣ ಪ್ರಯತ್ನ ಮಾಡಿದೆ. ಸರಕಾರ ಕೈಕೊಂಡ ದೃಢ ನಿಲುವು ಅಭೂತಪೂರ್ವ ರಾಷ್ಟ್ರೀಯ ಅಭಿವೃದ್ಧಿಯ ಪುನರುಜ್ಜೀವನಕ್ಕೆ ಕಾರಣವಾಗಿದೆ.

ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಮತ್ತು ಜಗತ್ತಿನ ಐದನೇ ಅತೀದೊಡ್ಡ ಆರ್ಥಿಕತೆ ಆಗಿದೆ. ನಮ್ಮ ಆರ್ಥಿಕತೆಯನ್ನು ‘ಸತ್ತಿದೆ’ ಎಂದು ಹೇಳಲು ಟ್ರಂಪ್ ಅವರು ಕುರುಡರಾಗಿರಬೇಕು ಇಲ್ಲವೇ ಅಜ್ಞಾನಿಗಳಾಗಿರಬೇಕು. ಅವರ ಹೇಳಿಕೆಗಳನ್ನು ಆನಂದಿಸಿ ಭಾರತದಲ್ಲಿ ಅವರ ಭ್ರಮೆಯ ವಕ್ತಾರರಾಗಲು ಹೊರಟಿರುವ ವಿರೋಧ ಪಕ್ಷದ ಕೆಲ ನಾಯಕರಿಗೆ ಎಚ್ಚರಿಕೆಯ ಮಾತು ಹೇಳ ಬಯಸುತ್ತೇನೆ. ಅವರ ಹತಾಶೆಯನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಆದರೆ, ಅವರು ತಮ್ಮನ್ನು ಮತ್ತು ತಮ್ಮ ಪಕ್ಷಗಳಿಗೆ ಹಾನಿ ಮಾಡಿಕೊಳ್ಳಬಾರದು ಮತ್ತು ಟ್ರಂಪ್ ಅವರೊಂದಿಗೆ ಇತಿಹಾಸದ ಕಸದಬುಟ್ಟಿಗೆ ಬಹುಬೇಗನೆ ಸೇರಬಾರದು.

ರಾಜಕೀಯ

ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತಾಡಲಿ: ಪ್ರಿಯಾಂಕ್ ಖರ್ಗೆ

ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ

ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣದ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

[ccc_my_favorite_select_button post_id="112013"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!