ರಾಯಚೂರು: ಕಲಿಯುಗದ ಕಾಮಧೇನು ಎಂದೇ ಪ್ರಸಿದ್ಧ ರಾಗಿರುವ ಮಂತ್ರಾಲಯದ (Mantralaya) ಶ್ರೀರಾಘವೇಂದ್ರ ಸ್ವಾಮಿಯವರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಆಗಸ್ಟ್ 8ರಿಂದ 14ರವರೆಗೆ ನಡೆಯಲಿರುವ ಸಪ್ತರಾತ್ರೋತ್ಸವದಲ್ಲಿ ಪ್ರತಿದಿನವೂ ಶ್ರೀಮಠದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ.
ಶ್ರೀಮಠದ ಪೀಠಾಧಿಪತಿ ಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಸಾನ್ನಿಧ್ಯದಲ್ಲಿ ಸಪ್ತರಾತ್ರೋತ್ಸವ ನಡೆಯಲಿದೆ.
ಪ್ರತಿದಿನ ಶ್ರೀಗುರುರಾಯರ ನಿರ್ಮಲ್ಯ ವಿಸರ್ಜನ, ಉತ್ಸವ ರಾಯರ ಪಾದಪೂಜೆ, ಪಂಚಾಮೃತ, ಶ್ರೀಮೂಲರಘುಪತಿ ವೇದವ್ಯಾಸದೇವರ ಸಂಸ್ಥಾನ ಪೂಜೆ, ಅಲಂಕಾರ ಸಮರ್ಪಣೆ, ಹಸ್ತೋದಕ. ಹಾಗೂ ಮಹಾಮಂಗಳಾರತಿ ನೆರವೇರಿಸಲಾಗುತ್ತದೆ.
ಸಂಜೆ ಹಗಲು ದೀವಟಿಗೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.