ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್.. ಶಿಕ್ಷೆ ವಿಧಿಸಿದ ನ್ಯಾಯಾಲಯ

Prajwal punished: Private news channel anchor trolled

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆ.02) ಶಿಕ್ಷೆ ವಿಧಿಸಿ, ಆದೇಶ ಹೊರಡಿಸಿದೆ.

ನಿನ್ನೆ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯಾಗಿದ್ದಾನೆಂದು ನ್ಯಾಯಾಧೀಶರು ಹೇಳಿ, ಇಂದು ಶಿಕ್ಷೆಯ ಪ್ರಮಾಣವನ್ನು ತಿಳಿಸುವುದಾಗಿ ಹೇಳಿದ್ದರು.

ಅದರಂತೆ ಇಂದು ಮಧ್ಯಾಹ್ನದಿಂದ ಕಿಕ್ಕಿರಿದು ತುಂಬಿದ್ದ ವಕೀಲರ ಸಮ್ಮುಖದಲ್ಲಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿತ್ತು.

ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376(2)(2), 376(2)(5), 506, 354-2, 354(2), 354(2), 354(2) , 662 8 ದಾಖಲಿಸಲಾಗಿತ್ತು.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಗಳ ಪೆನ್ ಡ್ರೈವ್ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ವಿಶ್ವಾದ್ಯಂತ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.

2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ, ಕೆ.ಆ‌ರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರೇಪ್ ಕೇಸ್ ದಾಖಲಿಸಿಕೊಂಡಿದ್ದರು.

ಕೇವಲ 7 ತಿಂಗಳಿನಲ್ಲಿ ಸಾಕ್ಷ್ಯ ವಿಚಾರಣೆ ಪೂರ್ಣಗೊಳಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ತೀರ್ಪು ನೀಡಿ, ಜೀವಾವಧಿ ಶಿಕ್ಷೆ (ಜೀವಿತಾವಧಿ ಸೆರೆವಾಸ), ವಿವಿಧ ಸೆಕ್ಷನ್ ಅಡಿಯಲ್ಲಿ ರೂ.10 ಲಕ್ಷ ದಂಡ (7 ಲಕ್ಷರೂ. ಸಂತ್ರಸ್ತೆಗೆ ನೀಡಬೇಕು) ವಿಧಿಸಿದ್ದಾರೆಂದು ವರದಿಯಾಗಿದೆ.

ಇಂದಿನಿಂದಲೇ ಶಿಕ್ಷೆ ಆರಂಭವಾಗಲಿದ್ದು, ಪೊಲೀಸರು ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ದಿದ್ದಾರೆ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]