ಬೆಳಗಾವಿ: ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಸೇರಿಸಿದ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಹೂಲಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 41 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಮುಖ್ಯ ಶಿಕ್ಷಕ ಸುಲೇಮಾನ್ ಗೋರಿನಾಯಕ್ ಕೆಲಸ ಮಾಡುತ್ತಿದ್ದಾರೆ. ಇವರನ್ನು ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಗ್ರಾಮದ ಸಾಗರ್ ಪಾಟೀಲ್ ಎಂಬಾತ ಕೃಷ್ಣಾ ಮಾದರ ಎಂಬುವವನ ಕಡೆಯಿಂದ ಕೀಟನಾಶಕ ಪಡೆದು ಮಕ್ಕಳು ನೀರು ಕುಡಿಯುವ ಟ್ಯಾಂಕ್ ಗೆ ಬೆರೆಸಿದ್ದರು.
ಕಳೆದ ಜುಲೈ 14 ರಂದು ಕೀಟನಾಶಕ ಬೆರೆಸಿದ್ದ ನೀರು ಕುಡಿದು 11 ಕೂಡಲೇ ಅಸ್ವಸ್ಥರಾಗಿದ್ದ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಿಗೆ ಕೀಟನಾಶಕ ಬೆರೆಸಿದ್ದ ಪ್ರಮುಖ ಆರೋಪಿ ಸಾಗರ್ ಪಾಟೀಲ್, ಕೃಷ್ಣಾ ಮಾದರ್, ಹಾಗೂ ನಾಗನಗೌಡ ಪಾಟೀಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ.