ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಆಗಸ್ಟ್ 4 ರಂದು ಪ್ರತಿಭಟನೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ( Narendra Modi) ಬೆಂಗಳೂರಿಗೆ ಭೇಟಿ ನಿಗದಿಯಾಗಿದೆ.
ಬೆಂಗಳೂರು ನಗರದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10ರಂದು ಹಸಿರು ನಿಶಾನೆ ತೋರಿಸಲಿದ್ದಾರೆ.
I am pleased to announce that the Hon’ble Prime Minister of India has kindly agreed to inaugurate 19.15 km Yellow Line from RV Road to Bommasandra of Bangaluru metro with 16 stations at the cost of Rs 5,056.99 Cr and lay the foundation stone of 44.65 km of Bangalore phase-3 at… pic.twitter.com/Xxkh9iw6t9
— Office of Manohar Lal (@officeofmlk) August 2, 2025
ಈ ಕುರಿತಂತೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಹಾಗೂ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನೂ ಸಂಸದ ತೇಜಸ್ವಿ ಸೂರ್ಯ ಎಕ್ಸ್ ಖಾತೆಯಲ್ಲಿ ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿವೆ. ಇದು ಸಿಲ್ಕ್ ಬೋರ್ಡ್ ಸಂಚಾರ ದಟ್ಟಣೆ ಸಮಸ್ಯೆಯನ್ನು ಬಹುಮಟ್ಟಿಗೆ ಪರಿಹರಿಸಲಿದೆ. ಸಾರ್ವಜನಿಕ ಸಾರಿಗೆ ಬಳಕೆ ಮಾತ್ರವೇ ಸಂಚಾರ ದಟ್ಟಣೆ ಇಳಿಕೆಗೆ ಉತ್ತಮ ಪರಿಹಾರವಾಗಿದೆ.
Hon. PM Sri @narendramodi Ji’s visit to Bengaluru on August 10 will be a landmark moment for Bengaluru South.
— Tejasvi Surya (@Tejasvi_Surya) August 3, 2025
He will not only inaugurate the long-awaited Yellow Line Metro operations but also lay the foundation stone for Metro Phase 3 – a project that received Cabinet approval…
ನಮ್ಮ ನಗರದ ಮೂಲಭೂತ ಸೌಕರ್ಯಗಳಿಗೆ ಸದಾ ಆದ್ಯತೆ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ನಿವಾಸಿಗಳ ಪರವಾಗಿ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.