BJP supports transport workers' protest: R. Ashoka

ಸಾರಿಗೆ ನೌಕರರ ಪ್ರತಿಭಟನೆಗೆ ಬಿಜೆಪಿ ಬೆಂಬಲ: ಆರ್.ಅಶೋಕ

ಮಂಡ್ಯ: ಕೆ ಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ (R. Ashoka) ಆಕ್ರೋಶ ವ್ಯಕ್ತಪಡಿಸಿದರು.

ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜ ಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು ಹಾಕುತ್ತಿರುವುದು ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮಾಡಿದ ಅಪಮಾನ ಎಂದು ಕಿಡಿಕಾರಿದ್ದಾರಲ್ಲದೇ ಟಿಪ್ಪು ಸುಲ್ತಾನನೊಬ್ಬ ನಾಡದ್ರೋಹಿ, ಪರ್ಶಿಯಾದವನು, ಮತಾಂಧ, ಸಾವಿರಾರು ಹಿಂದೂಗಳನ್ನು ಕೊಂದು ದೇವಾಲಯಗಳನ್ನು ಕೆಡವಿದವನು ಅಂತವನ ಹೆಸರು ಕೆಆರ್‌ಎಸ್ ಗೆ ಇಡಲು ಹೊರಟಿರುವುದು ಕಾಂಗ್ರೆಸ್‌ ಮನಸ್ಥಿತಿಯನ್ನ ತೋರಿಸಿದೆ ಎಂದು ಕಿಡಿಕಾರಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮೈಸೂರಿನ ಮಹಾಶಿಲ್ಪಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತದಲ್ಲಿ ಹಳೇ ಮೈಸೂರು ಸಾಕಷ್ಟು ಅಭಿವೃದ್ಧಿ ಕಂಡಿತ್ತು.ಕೆಆರ್‌ಎಸ್ ಜಲಾಶಯ ನಿರ್ಮಾಣಕ್ಕೆ ಯಾರ ಮೇಲೂ ತೆರಿಗೆ ಹಾಕಿರಲಿಲ್ಲ. ಆದರೆ ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ 2 ಲಕ್ಷ ಕೋಟಿ ಸಾಲ ಮಾಡಿ, ಜನರ ಮೇಲೆ ತೆರಿಗೆಯ ಬರೆ ಎಳೆದಿದೆ. ಇಂಥ ಮುಖ್ಯಮಂತ್ರಿಯನ್ನ ನಾಲ್ವಡಿ ಹೋಲಿಕೆ ಮಾಡುವುದು ಕೂಡ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಗೌರವ ಉಳಿಯಬೇಕಾದ್ರೆ ಕೂಡಲೇ ರಾಜ್ಯದ ಜನತೆ, ನಾಲ್ವಡಿ ಕುಟುಂಬಕ್ಕೆ ಕ್ಷಮಾಪಣೆ ಕೇಳಿ. ಹೀಗೆ ಮಾತನಾಡಿದ್ರೆ ಜನರು ನಿಮ್ಮ ಪಕ್ಷವನ್ನು ಧೂಳಿಪಟ ಮಾಡ್ತಾರೆ. ತಕ್ಷಣವೇ ರಾಜಮನೆತನಕ್ಕೆ ಕ್ಷಮೆಯಾಚಿಸಿ ಗೌರವ ಉಳಿಸಿಕೊಳ್ಳಿ, ಎಂದು ಆಗ್ರಹಿಸಿದರು.

ಎರಡು ವರ್ಷ ಎಲ್ಲಿದ್ಯಪ್ಪ ರಾಹುಲ್ ಗಾಂಧಿ? ಅಶೋಕ್ ವ್ಯಂಗ್ಯ

ರಾಹುಲ್ ಗಾಂಧಿಯವರ ಬಗ್ಗೆಯೂ ಕಿಡಿಕಾರಿದ ಆರ್ ಅಶೋಕ್, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ ಬಂದಿದ್ದಾರೆ. ಕಳೆದ ಎರಡು ವರ್ಷದ 2,000 ರೈತ ಆತ್ಮಹತ್ಯೆ, ಗರ್ಭಿಣಿಯರ ಸಾವು, ಮೈಕ್ರೋ ಫೈನಾನ್ಸ್‌ನಿಂದ ಸಾವುಗಳಾದವು, ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಯಾ ಯುವಕರು ಸತ್ತರಲ್ಲ ಆಗ ಯಾಕೆ ಬರಲಿಲ್ಲ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಚುನಾವಣಾ ಅಕ್ರಮಗಳನ್ನು ಹೋರಾಟವನ್ನು ಭೂತದ ಕೈಯಲ್ಲಿ ಭಗವದ್ಗೀತೆ ಗೆ ಹೋಲಿಸಿದರು. ರಾಹುಲ್ ಗಾಂಧಿ ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಸವಾಲು ಹಾಕಿದ ಆರ್ ಅಶೋಕ್ ಅವರು ಕನಕಪುರ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ಕಾಂಗ್ರೆಸ್‌ನ ಆರೋಪಗಳನ್ನು ತಳ್ಳಿಹಾಕಿದರು. ಕಾಂಗ್ರೆಸ್ ನ ಒಳಜಗಳ ಮರೆಮಾಚಲು ರಾಹುಲ್ ಗಾಂಧಿ ಕರೆತರುತ್ತಿದ್ದಾರೆ. ನಾಳೆ ವಿಧಾನಸೌಧದ ಮುಂದೆ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಘೋಷಿಸಿದರು.

ಸಾರಿಗೆ ನೌಕರರ ಪ್ರತಿಭಟನೆಗೆ ಬೆಂಬಲ

ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ ಆರ್ ಅಶೊಕ್, ನಾನು ಸಾರಿಗೆ ಸಚಿವನಾಗಿದ್ದಾಗ ಅವರ ಬೇಡಿಕೆ ಈಡೇರಿಸಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ 4 ವರ್ಷದ ಹಿಂಬಾಕಿ ಕೊಡದೆ, ಸಾರಿಗೆ ಸಿಬ್ಬಂದಿಗೆ, ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ತಕ್ಷಣ ಬೇಡಿಕೆ ಈಡೇರಿಸಲಿ ಎಂದು ಒತ್ತಾಯಿಸಿದ್ದಾರೆ. ‘ಸರ್ಕಾರದ ಖಜಾನೆ ಖಾಲಿಯಾಗಿದೆ, ಜನರನ್ನು ಕೊಳ್ಳೆಹೊಡೆಯಲಾಗುತ್ತಿದೆ. ಸರ್ಕಾರಿ ನೌಕರರಿಗೆ ಸಂಬಳವೂ ಸರಿಯಾಗಿ ಸಿಗುತ್ತಿಲ್ಲ’ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಇಂಡವಾಳು ಸಚ್ಚಿದಾನಂದ, ಅಶೋಕ್ ಜಯರಾಂ ಉಪಸ್ಥಿತರಿದ್ದರು.

ರಾಜಕೀಯ

ಸಾರಿಗೆ ನೌಕರರ ಪ್ರತಿಭಟನೆಗೆ ಬಿಜೆಪಿ ಬೆಂಬಲ: ಆರ್.ಅಶೋಕ

ಸಾರಿಗೆ ನೌಕರರ ಪ್ರತಿಭಟನೆಗೆ ಬಿಜೆಪಿ ಬೆಂಬಲ: ಆರ್.ಅಶೋಕ

ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ ಆರ್ ಅಶೊಕ್, ನಾನು ಸಾರಿಗೆ ಸಚಿವನಾಗಿದ್ದಾಗ ಅವರ ಬೇಡಿಕೆ ಈಡೇರಿಸಿದ್ದೆ. R.Ashoka

[ccc_my_favorite_select_button post_id="112108"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ

[ccc_my_favorite_select_button post_id="112064"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!