Doddaballapura; Shravana masa bhajan have been going on for 89 years

ದೊಡ್ಡಬಳ್ಳಾಪುರ; 89 ವರ್ಷಗಳಿಂದ ನಡೆಯುತ್ತಿದೆ ಶ್ರಾವಣ ಮಾಸದ ಭಜನೆ..!

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯಲ್ಲಿ ಕಳೆದ 89 ವರ್ಷಗಳಿಂದ ಶ್ರಾವಣ ಮಾಸದ ಭಜನೆ ನಡೆಯುತ್ತಿದೆ.

ಒಂದು ತಿಂಗಳ ಕಾಲ ನಿರಂತರವಾಗಿ ಮಧುರೆ ಹೋಬಳಿಯ ಗ್ರಾಮಗಳಲ್ಲಿ ಇಸ್ತೂರು ಕೋದಂಡರಾಮಸ್ವಾಮಿ  ಭಜನಾ ಮಂಡಲಿ ನೇತೃತ್ವದಲ್ಲಿ ನಡೆಯುವ ಭಜನೆ ಕಾರ‌್ಯಕ್ರಮ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಭಜನೆ ಕಲೆ ಜೀವಂತವಾಗಿರುವುದಕ್ಕೆ  ಸಾಕ್ಷಿಯಾಗಿದೆ.

ಮಧುರೆ ಹೋಬಳಿಯ ಶ್ರಾವಣ ಮಾಸದ ಭಜನಾ ಕಾರ‌್ಯಕ್ರಮ 1936ರಲ್ಲಿ ಪ್ರಾರಂಭ ವಾಗಿದೆ. ಇಸ್ತೂರು ಗ್ರಾಮದ ಬೈರಹನುಮೇ ಗೌಡ ಎಂಬುವರು ಈ ಭಜನಾ ಕಾರ‌್ಯಕ್ರಮವನ್ನು ಮೊದಲಿಗೆ ಸಂಘಟಿಸಿದ್ದಾರೆ.

ಪ್ರಸ್ತುತ ಇಸ್ತೂರು ಕೋದಂಡರಾಮಸ್ವಾಮಿ ಭಜನಾ ಸಂಘ ಈ ಕಾರ್ಯವನ್ನು ನಿರ್ವಹಣೆ ಮಾಡುತ್ತದೆ. ಚನ್ನಾ ದೇವಿ ಅಗ್ರಹಾರ ಗ್ರಾಮದ ನಂಜೇಗೌಡ ಅಧ್ಯಕ್ಷರು, ಇಸ್ತೂರು ರಾಮಯ್ಯ   ಉಪಾಧ್ಯಕ್ಷರು, ಗಂಡರಗೂಳಿಪುರದ ಹನುಮಂತರಾಯಪ್ಪ  ಕಾರ್ಯ ದರ್ಶಿ, ಹೊನ್ನಾದೇವಿಪುರ ಗ್ರಾಮದ ಮಹಾದೇವಯ್ಯ ಖಂಜಾಚಿಯಾಗಿದ್ದಾರೆ.

ಈ ಬಾರಿ ಶ್ರಾವಣ ಮಾಸದ ಮೊದಲ ದಿನ ಇಸ್ತೂರು ಗ್ರಾಮದಲ್ಲಿ ಭಜನೆ ಪ್ರಾರಂಭವಾಗಿದೆ. ಶ್ರಾವಣ ಮಾಸದ ಕೊನೆಯ ದಿನ ಮಲ್ಲೋಹಳ್ಳಿ ಗ್ರಾಮದಲ್ಲಿ ಕೊನೆಗೊಳ್ಳುತ್ತದೆ. 

ಭಜನೆ ಕಾರ‌್ಯಕ್ರಮದ ಸಮಾರೋಪ ಗೊಲ್ಲಹಳ್ಳಿ ಬೈಲಾಂಜ ನೇಯಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತದೆ.

ಮಧುರೆ ಹೋಬಳಿಯ ಇಸ್ತೂರು, ಇಸ್ತೂರು ಕಾಲೋನಿ, ಗಂಡರಗೊಳಿಪುರ,  ಶ್ಯಾಕಲದೇವನಪುರ, ಗಾಡಿಗರಪಾಳ್ಯ,   ಸಿಂಪಾಡಿಪುರ, ಮಲ್ಲೋಹಳ್ಳಿ, ಚನ್ನಾದೇವಿ ಅಗ್ರಹಾರ, ಕನಸವಾಡಿ, ಮಲ್ಲೋಹಳ್ಳಿ,  ಮುಪ್ಪಡಿಘಟ್ಟ, ಮದಗೊಂಡನ ಹಳ್ಳಿ, ಚಲ್ಲಹಳ್ಳಿ, ಮಾರಸಂದ್ರ, ಬಂಡಯ್ಯನ ಪಾಳ್ಯ, ತಿಮ್ಮಸಂದ್ರ, ತಿಮ್ಮಸಂದ್ರ ಕಾಲೋನಿ, ಪುಟ್ಟೇನಹಳ್ಳಿ, ಕಮ್ಮಸಂದ್ರ  ಗ್ರಾಮಗಳಲ್ಲಿ ಶ್ರಾವಣ ಮಾಸದ ನಿರಂತರ ಭಜನಾ ಕಾರ‌್ಯಕ್ರಮ ನಡೆಯುತ್ತದೆ.

ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ, ತಬಲ, ತಾಳ ಮುಂತಾದೊಂದಿಗೆ ಕಲಾವಿದರು ಪುರಂದರದಾಸ, ಕನಕದಾಸ, ತತ್ತ್ವ ಪದಕಾರರು, ಶಿಶುನಾಳ ಷರೀಫ್,  ಜನಪದರು ಮುಂತಾದವರು ರಚಿಸಿರುವ ಸಾಹಿತ್ಯವನ್ನು ಕಲಾವಿದವರು ಹಾಡುತ್ತಾರೆ.

ಇವರು ಹೆಚ್ಚಿನವರು ಪೌರಾಣಿಕ ನಾಟಕಗಳಲ್ಲಿ ಕಲಾವಿದರಾಗಿ ಅಭಿನಯಿಸಿದವರು.

ಹರಿಕಥಾ ವಿದ್ವಾಂಸರು, ವಿವಿಧ ಗ್ರಾಮಗಳಲ್ಲಿರುವ ಭಜನಾ ಮಂಡಲಿಯ ಸದಸ್ಯರುಗಳು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಗ್ರಾಮದ ಪ್ರತಿಮನೆಗಳಿಗೂ ಭಜನಾ ತಂಡ ಹೋಗಿ ಸ್ವಲ್ಪ ಸಮಯ ಭಜನೆ ಮತ್ತು ಪೂಜಾ ಕಾರ್ಯಕ್ರಮ ನಡೆಸಿಕೊಡುತ್ತಾರೆ.

ವಿಶೇಷ ವರದಿ; ಹಿರಿಯ ಪತ್ರಕರ್ತ ಪಿ.ಗೋವಿಂದರಾಜು

ರಾಜಕೀಯ

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು

[ccc_my_favorite_select_button post_id="112106"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ

[ccc_my_favorite_select_button post_id="112064"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!