ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Protest meeting against vote rigging postponed to August 8: DCM D.K. Shivakumar

ಬೆಂಗಳೂರು: “ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ಅವರು ತಿಳಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು.

“ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.

“ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.

“ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದರು.

“ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯವರು ಚುನಾವಣಾ ಆಯೋಗದ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವವರು, ಟೀಕಿಸುವವರನ್ನು ಸ್ವಾಗತಿಸುತ್ತೇವೆ. ಅವರು ಏನು ಹೇಳಬೇಕೋ ಹೇಳಲಿ. ನೀವುಗಳು ಹೇಳಿದಂತೆ ಅವರು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡು ಪ್ರತಿಭಟಿಸುತ್ತಿದ್ದಾರೆ. ಚುನಾವಣಾ ಆಯೋಗ ಸರಕಾರದ ಭಾಗವಾಗಿದೆ. ಹೀಗಾಗಿ ಇದನ್ನು ಮಾಡುತ್ತಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಹಾಗೂ ನ್ಯಾಯಪೀಠ ಸ್ಥಾನದಲ್ಲಿ ಇರಬೇಕು. ನ್ಯಾಯಪೀಠದಿಂದ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯ. ವಿಧಾನಸಭೆ ಚುನಾವಣೆ ಸಮಯದಲ್ಲೇ ಮಹದೇವಪುರ ಕ್ಷೇತ್ರದ ನಮ್ಮ ಅಭ್ಯರ್ಥಿ ಸೂಕ್ತ ದಾಖಲೆಯೊಂದಿಗೆ ದೂರು ನೀಡಿದ್ದರು. ಅವರ ದೂರಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಈ ವಿಚಾರವಾಗಿ ಅಧ್ಯಯನ ನಡೆಸಿದ ನಂತರ ಮತ್ತಷ್ಟು ಅಂಶಗಳು ಬೆಳಕಿಗೆ ಬಂದಿವೆ. ಈ ವಿಚಾರ ತಡವಾಗಿ ಬಹಿರಂಗವಾಗುತ್ತಿರಬಹುದು, ಹಾಗೆಂದು ನಾವು ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ನಮ್ಮ ಅಧ್ಯಯನದ ಅಂಶಗಳನ್ನು ಸಾರ್ವಜನಿಕರ ಮುಂದೆ ಇಡುತ್ತೇವೆ. ನಂತರ ಯಾರು ಸರಿ, ಯಾರು ತಪ್ಪು ಎಂಬುದನ್ನು ಜನ ತೀರ್ಮಾನ ಮಾಡಲಿ” ಎಂದು ತಿಳಿಸಿದರು.

ಶಾಸಕಾಂಗ ಸಭೆ ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮದ ಉದ್ದೇಶಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವ ಶಾಸಕರ ಜೊತೆ ಚರ್ಚೆ ಮಾಡಲು ನಮ್ಮ ನಾಯಕರು ಹೇಳಿದ್ದಾರೆ” ಎಂದು ಸ್ಪಷಪಡಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]