ಚಿತ್ರದುರ್ಗ: ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ ನಗರದ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ಸಂಭವಿಸಿದೆ.
ನಗರದ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ನ ಬ್ರೇಕ್ ಫೇಲ್ ಆಗಿ ಮುಂದಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಈ ಆಟೋ ಮುಂದೆಯೇ ಇದ್ದ ಮತ್ತೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಎರಡೂ ಬಸ್ ಗಳ ಮಧ್ಯೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಟೋದಲ್ಲಿದ್ದ ಚಾಲಕ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಪಾದಚಾರಿಗಳಿಗೂ ಯಾವುದೇ ತೊಂದರೆಯಾಗಿಲ್ಲ.
ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.