ಬೆಂಗಳೂರು: ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಸಾರಿಗೆ (Bus transport) ಮುಷ್ಕರಕ್ಕೆ ಕರೆ ನೀಡಿದೆ.
ಹಾಗಾಗಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಸರ್ಕಾರಿ ಬಸ್ ಸೇವೆ ವ್ಯತ್ಯಯಗೊಳ್ಳಲಿದೆ. ಕ್ರಿಯಾ ಸಮಿತಿ ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದೆ.
ಇನ್ನೊಂದೆಡೆ ಹೈಕೋರ್ಟ್ ಒಂದು ದಿನದ ಮಟ್ಟಿಗೆ ಸಾರಿಗೆ ಮುಷ್ಕರ ಮುಂದೂಡಿ ಎಂಬ ಆದೇಶದ ನಡುವೆಯೂ ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳು ರಸ್ತೆಗಿಳಿಯುವುದಿಲ್ಲ ಎಂದು ಸಮಿತಿ ಮುಖಂಡರು ಘೋಷಿಸಿದ್ದಾರೆ.
ಸಾರಿಗೆ ನಿಗಮದ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಎಸ್ಮಾ ಜಾರಿ ಮಾಡಿದೆ. ‘ಎಂದಿನಂತೆ ಬಸ್ ಸಂಚಾರ ಇರಲಿದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೇಳಿದರೆ, ‘ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ’ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬಸ್ ಸೇವೆ ಇರಲಿದೆಯೋ, ಇಲ್ಲವೋ ಎಂಬುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.
ಸಭೆ: ಸಿಎಂ ಸಿದ್ದರಾಮಯ್ಯ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬಳಿಕ ನಿಗದಿಯಂತೆ ಮುಷ್ಕರ ನಡೆಸಲು ಕಾರ್ಮಿಕರ ಸಂಘಟನೆ ಮುಂದಾಗಿತ್ತು. ಈ ಮಧ್ಯೆ ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡುವಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಇದೀಗ ಪ್ರತಿಭಟನೆ ಕೈ ಬಿಟ್ಟು ಕೆಲಸಕ್ಕೆ ಗೈರು ಹಾಜರಾಗಲು ಮುಂದಾಗಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಟನೆ ಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸರಕಾರ ವಿವಿಧ ಹಂತದಲ್ಲಿ ಸಂಧಾನ ಸಭೆಗಳನ್ನು ಕಳೆದೊಂದು ವಾರದಿಂದ ಮಾತುಕತೆ ನಡೆಸುತ್ತಿದೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೂ ಎರಡು ಸಭೆ ನಡೆದಿದ್ದು, ನೌಕರರ ಸಂಘಟನೆ ಹಾಗೂ ಸರಕಾರದ ನಡುವೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ಸಂಘ ಕರೆ ನೀಡಿತ್ತು.
ಮನವಿ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಸಂಕೋಟೆಗಳು ಕಡೆಯಾಡಿದೆ ನೀಡಿರುವುದರಿಂದ, ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಇದರೊಂದಿಗೆ ಸಿಎಂ ಸಹ ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಲಾಗಿದೆ; ಅಕ್ರಂ ಪಾಷ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ