ಗುಡ್ಮಾರ್ನಿಂಗ್ ನ್ಯೂಸ್: ಇಂದಿನಿಂದ ಸಾರಿಗೆ ಬಸ್ ಬಂದ್.. ಹೈಕೋರ್ಟ್ ತಡೆಯಾಜ್ಞೆ

Bus transport to be shut from today.. High Court orders stay

ಬೆಂಗಳೂರು: ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಸಾರಿಗೆ (Bus transport) ಮುಷ್ಕರಕ್ಕೆ ಕರೆ ನೀಡಿದೆ.

ಹಾಗಾಗಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಸರ್ಕಾರಿ ಬಸ್ ಸೇವೆ ವ್ಯತ್ಯಯಗೊಳ್ಳಲಿದೆ. ಕ್ರಿಯಾ ಸಮಿತಿ ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದೆ.

ಇನ್ನೊಂದೆಡೆ ಹೈಕೋರ್ಟ್ ಒಂದು ದಿನದ ಮಟ್ಟಿಗೆ ಸಾರಿಗೆ ಮುಷ್ಕರ ಮುಂದೂಡಿ ಎಂಬ ಆದೇಶದ ನಡುವೆಯೂ ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳು ರಸ್ತೆಗಿಳಿಯುವುದಿಲ್ಲ ಎಂದು ಸಮಿತಿ ಮುಖಂಡರು ಘೋಷಿಸಿದ್ದಾರೆ.

ಸಾರಿಗೆ ನಿಗಮದ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಎಸ್ಮಾ ಜಾರಿ ಮಾಡಿದೆ. ‘ಎಂದಿನಂತೆ ಬಸ್‌ ಸಂಚಾರ ಇರಲಿದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೇಳಿದರೆ, ‘ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ’ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬಸ್ ಸೇವೆ ಇರಲಿದೆಯೋ, ಇಲ್ಲವೋ ಎಂಬುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಸಭೆ: ಸಿಎಂ ಸಿದ್ದರಾಮಯ್ಯ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬಳಿಕ ನಿಗದಿಯಂತೆ ಮುಷ್ಕರ ನಡೆಸಲು ಕಾರ್ಮಿಕರ ಸಂಘಟನೆ ಮುಂದಾಗಿತ್ತು. ಈ ಮಧ್ಯೆ ಒಂದು ದಿನದ ಮಟ್ಟಿಗೆ ಮುಷ್ಕರ ಕೈಬಿಡುವಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಇದೀಗ ಪ್ರತಿಭಟನೆ ಕೈ ಬಿಟ್ಟು ಕೆಲಸಕ್ಕೆ ಗೈರು ಹಾಜರಾಗಲು ಮುಂದಾಗಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಟನೆ ಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸರಕಾರ ವಿವಿಧ ಹಂತದಲ್ಲಿ ಸಂಧಾನ ಸಭೆಗಳನ್ನು ಕಳೆದೊಂದು ವಾರದಿಂದ ಮಾತುಕತೆ ನಡೆಸುತ್ತಿದೆ.

ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೂ ಎರಡು ಸಭೆ ನಡೆದಿದ್ದು, ನೌಕರರ ಸಂಘಟನೆ ಹಾಗೂ ಸರಕಾರದ ನಡುವೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ಸಂಘ ಕರೆ ನೀಡಿತ್ತು.

ಮನವಿ: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಸಂಕೋಟೆಗಳು ಕಡೆಯಾಡಿದೆ ನೀಡಿರುವುದರಿಂದ, ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಇದರೊಂದಿಗೆ ಸಿಎಂ ಸಹ ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಲಾಗಿದೆ; ಅಕ್ರಂ ಪಾಷ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]