ದೊಡ್ಡಬಳ್ಳಾಪುರ: ತಾಲೂಕಿನ ಕಾಡತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘದ (VSSN) ಮಾಜಿ ನಿರ್ದೇಶಕ ಹನುಮಂತರಾಯಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.
ದೊಡ್ಡಬಳ್ಳಾಪುರ ತಾಲೂಕಿನ ಹನುಮಂತಯ್ಯನಪಾಳ್ಯದ ನಿವಾಸಿಯಾದ ಹನುಮಂತರಾಯಪ್ಪ ಅವರು, ಸಾಸಲು ಹೋಬಳಿ ಜೆಡಿಎಸ್ ಅಧ್ಯಕ್ಷ ಸಿದ್ದಪ್ಪನವರ ಸಹೋದರ.
ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಹನುಮಂತರಾಯಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಮಡದಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ( ಆ.06 )ರಂದು ತಾಲೂಕಿನ ಹನುಮಂತಯ್ಯನ ಪಾಳ್ಯದ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.