Transport strike: R. Ashoka attacks, CM Siddaramaiah retaliates

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike) 10 ತಾಸಿನ ಬಳಿಕ ಅಂತ್ಯಗೊಂಡಿದೆ. ಮುಷ್ಕರದ ವಿರುದ್ದ ಹೈಕೋರ್ಟ್‌ ತೀವ್ರ ಚಾಟಿ ಬೀಸಿದ ಕಾರಣ, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಸಂಜೆಯ ಹೊತ್ತಿಗೆ ಮುಷ್ಕರ ಹಿಂಪಡೆದಿದೆ.

ಈ ಮುಷ್ಕರ ಆಡಳಿ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ- ಪ್ರತ್ಯಾರೋಪಕ್ಕೂ ಕಾರಣವಾಗಿದೆ.

ಆರ್. ಅಶೋಕ ಏಟು

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆ‌ರ್. ಅಶೋಕ್ ಲೇವಡಿ ಮಾಡಿದ್ದಾರೆ.

ಸಾಕು ಮಾಡಿ ಈ ನಾಟಕ. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ. ಕನ್ನಡಿಗರನ್ನು ನೆಮ್ಮದಿಯಾಗಿರಲು ಬಿಡಿ ಎಂದು ಎಕ್ಸ್ ಖಾತೆಯ ಮೂಲಕ ಒತ್ತಾಯಿಸಿದ್ದಾರೆ.

ಅಧಿಕಾರ ಇದ್ದಾಗ ಹಗಲು ವೇಷ, ವಿರೋಧ ಪಕ್ಷದಲ್ಲಿದ್ದಾಗ ರೋಷಾವೇಶ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ದಿವಾಳಿತನಕ್ಕೆ ಸಾರಿಗೆ ನೌಕರರು ಎಷ್ಟು ದಿನ ನಷ್ಟ ಅನುಭವಿಸಬೇಕು? ನಿಮ್ಮ ದುರಾಡಳಿತಕ್ಕೆ ಜನಸಾ ಮಾನ್ಯರು ಯಾಕೆ ದಿನನಿತ್ಯ ಪರದಾಡಬೇಕು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದಾಗ ಸಾರಿಗೆ ಸಂಸ್ಥೆಗಳಲ್ಲಿ 1000 ಕೋಟಿ ರು.ಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಸಾರಿಗೆ ನಿಗಮಗಳಲ್ಲಿ 25 ಸಾವಿರ ಜನರಿಗೆ ಕಾಯಂ ಉದ್ಯೋಗ ಕೊಟ್ಟಿದ್ದೆ. ಪ್ರಯಾ ಣಿಕರಿಗೆ ಗುಣಮಟ್ಟದ ನಿಲ್ದಾಣ ಮತ್ತು ಬಸ್ ಸೇವೆ, ಇಂಧನ ಉಳಿತಾಯ, ಜೈವಿಕ ಇಂಧನ ಬಳಕೆ ಮತ್ತಿತರ ಕಾರ್ಯ ದಕ್ಷತೆ ಗಮನಿಸಿ ಅಂದಿನ ಯುಪಿಎ ಸರ್ಕಾರ ರಾಜ್ಯಕ್ಕೆ 30ಕ್ಕೂ ಹೆಚ್ಚು ಪ್ರಶಸ್ತಿ ನೀಡಿತ್ತು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ತಿರುಗೇಟು

ಅಧಿಕಾರ ಇದ್ದಾಗ ನವರಂಗಿ ಆಟ. ಪ್ರತಿಪಕ್ಷದಲ್ಲಿ ದ್ದಾಗ ಗೋಸುಂಬೆ ನಾಟಕ. ಅಧಿಕಾರವಿದ್ದರೆ ಹಗಲು ವೇಷ, ಪ್ರತಿಪಕ್ಷದಲ್ಲಿದ್ದಾಗ ರೋಷಾವೇಶ. ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಿಎಂ ಸಿದ್ದರಾಮ್ಯಯ ವಾಗ್ದಾಳಿ ನಡೆಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೆ ಸಂಬಂಧಿಸಿ ಮಾತನಾಡಿರುವ ಅವರು, ಸಾರಿಗೆ ನೌಕರರು ಮೊದಲ ಬಾರಿ ವೇತನ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ? ಎಂದು ಅಶೋಕ್‌ ಅವರನ್ನು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಯನ್ನು ಖಂಡಿಸಿದ ಸಿಎಂ, ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ? ನಮ್ಮ ಸರಕಾರದ ಅವಧಿಯಲ್ಲಿ 2012-2016 ರವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು.

2016-2020 ರವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು. ಆದರೆ ತಮ್ಮ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 2023ರಿಂದ ಜಾರಿ ಗೊಳಿಸಿ ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ‌ ಪಕ್ಷದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ ರೂ.5,900 ಕೋಟಿ ಬಾಕಿ ಇತ್ತು ಎಂಬುದರ‌ ಬಗ್ಗೆ ನಿಮಗೆ ಮಾಹಿತಿಯಿದೆಯೇ?

ನಿಮ್ಮ ಪಕ್ಷದ ಅಧಿಕಾರವಾಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ನೇಮಕಾತಿಗೆ‌ ಚಾಲನೆ ನೀಡಿದವರು ನಾವು. 10,000 ಹೊಸ‌ ನೇಮಕಾತಿ ಮಾಡಿದ್ದೆವು. ಇದರಲ್ಲಿ 8 ವರ್ಷಗಳಿಂದ ಅನುಕಂಪದ ಆಧಾರದ ನೌಕರಿ ನೀಡದಿರುವ 1,000 ಮೃತರ ಅವಲಂಬಿತರು ಇದ್ದಾರೆ. 5,200 ಹೊಸ ಬಸ್ಸುಗಳ ಸೇರ್ಪಡೆ ಮಾಡಿದ್ದೇವೆ. ಕನಿಷ್ಠ ಈ ಮಾಹಿತಿಯಾದರೂ ನಿಮಗೆ ತಿಳಿದಿಯೇ?

ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್‌ ಮೊತ್ತ ಪಾವತಿ ಬಾಕಿ ಪಾವತಿಗಾಗಿ ರೂ.2,000 ಕೋಟಿ ಹಣವನ್ನು ಬ್ಯಾಂಕ್ ಗಳಿಂದ ಸಾಲ‌ ಪಡೆದವರು ನೀವು. ಅದರ ಅಸಲು ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತಿರುವವರು ನಾವು. ಇದೇನಾ ನಿಮ್ಮ ಕಾಲದ ಸರ್ಕಾರದ ಸಾಧನೆ?

ನಾನು ಖುದ್ದಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದೆ. ಇದಕ್ಕಿಂತ ಮೊದಲು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರೂ ಸಂಧಾನದ ಪ್ರಯತ್ನ ಮಾಡಿದ್ದಾರೆ.

ಆರ್ .ಅಶೋಕರ್ ಅವರೇ, ನಿಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿ ರೂ.718 ಕೋಟಿ ‌ವೇತನ‌ಪರಿಷ್ಕರಣೆ ಬಾಕಿ ನೀಡಲು ಶಿಫಾರಸು ಮಾಡಿತ್ತು. ಆದರೆ ನಿಮ್ಮ ಸರ್ಕಾರ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಿರಲಿಲ್ಲ. ಆ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ.

ನಮ್ಮ ಸರ್ಕಾರದ ಈ ನಿಲುವನ್ನು ಸಾರಿಗೆ ನೌಕರರಿಗೆ ತಿಳಿಸಿ ಮುಷ್ಕರ ಕೈಬಿಟ್ಟು ಮುಂದಿನ ದಿನಗಳಲ್ಲಿ ಮಾತುಕತೆ ಮುಂದುವರಿಸಬಹುದು ಎಂದು ಮನವಿ ಮಾಡಿದ್ದರೂ ನೌಕರರ ಸಂಘಟನೆಗಳು ಮುಷ್ಕರ ಹೂಡಿದ್ದಾರೆ.

ನಮ್ಮದು ಕಾರ್ಮಿಕರ ಪರ ಸರ್ಕಾರ, ಅವರ ಹಿತಾಸಕ್ತಿ ಕಾಪಾಡಲು ನಾವು ಬದ್ಧರಾಗಿದ್ದೇವೆ. ಭಾರತೀಯ ಜನತಾ ಪಕ್ಷ ರೈತರು ಮತ್ತು ಕಾರ್ಮಿಕರ ವಿರೋಧಿ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ.

ನಿಮ್ಮ ಮರೆಗುಳಿತನಕ್ಕೆ ನನ್ನ ಅನುಕಂಪ ಇದೆ. ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ ಎಂದು ಕುಟುಕಿದ್ದಾರೆ.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!