Allegations of massive vote rigging in 2014 elections: Rahul Gandhi releases Karnataka records

2014 ರ ಚುನಾವಣೆಯಲ್ಲಿ ಭಾರಿ ಮತ ವಂಚನೆ ಆರೋಪ: ಕರ್ನಾಟಕದ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನವದೆಹಲಿ: 2024ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯನ್ನು ಗೆಲ್ಲಲು ಬಿಜೆಪಿಯೊಂದಿಗೆ ಚುನಾವಣಾ ಆಯೋಗ ಕೈ ಜೋಡಿಸಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಗಂಭೀರ ಆರೋಪ ಮಾಡಿದ್ದಾರೆ.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಅವರು, 2024 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಚುನಾವಣಾ ಆಯೋಗದ (ECI) ಜೊತೆಗೂಡಿ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗದ ನಡುವೆ ಸಂಬಂಧವಿದೆ ಎಂದು ಹೇಳಿದರು. ವಿವಿಧ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರು ಮತ್ತು ನಕಲಿ ವಿಳಾಸಗಳನ್ನು ಸೇರಿಸಲಾಗಿದೆ ಎಂಬ ‘ಪುರಾವೆ’ಯನ್ನು ಅವರು ತೋರಿಸಿದರು.

2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಕ್ಷೇತ್ರದಲ್ಲಿ ಸುಮಾರು 1,00,250 ಮತಗಳ್ಳತನವಾಗಿದೆ ಎಂದು ಅಂಕಿ-ಅಂಶಗಳ ಸಮೇತ ಪ್ರಸ್ತಾಪಿಸಿರುವ ರಾಹುಲ್‌, ಈ ಪೈಕಿ 11,965 ನಕಲಿ ಮತದಾರರು ಒಂದೇ ವಿಧಾನಸಭೆ ವ್ಯಾಪ್ತಿಯಲ್ಲಿದ್ದಾರೆ. ಉಳಿದಂತೆ, ಸುಮಾರು 40,009 ಮಂದಿ ನಕಲಿ ಹಾಗೂ ಸುಳ್ಳು ವಿಳಾಸ ಹೊಂದಿದವರು.

10,452 ಮತದಾರರ ಹೆಸರಿನಲ್ಲಿ ಒಂದೇ ವಿಳಾಸ ಉಲ್ಲೇಖವಾಗಿದೆ. 4,132 ಮತದಾರರ ಫೋಟೊ ಅಮಾನ್ಯವಾಗಿದೆ. ಹಾಗೆಯೇ, ಸುಮಾರು 33,692 ಮಂದಿ ಹೊಸ ಮತದಾರರ ನೋಂದಣಿಗೆ ಇರುವ ಫಾರ್ಮ್-6 ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ದೇಶದಾದ್ಯಂತ ಇದೇ ರೀತಿಯ ಅಕ್ರಮಗಳು ನಡೆದಿವೆ ಎಂದು ಪ್ರತಿಪಾದಿಸಿರುವ ರಾಹುಲ್, ಇದು ಸಂವಿಧಾನ ಹಾಗೂ ರಾಷ್ಟ್ರದ ಸಮಗ್ರತೆಯ ವಿರುದ್ಧದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂಬುದನ್ನು ಆಯೋಗಕ್ಕೆ ನೆನಪಿಸಲು ಬಯಸುವುದಾಗಿಯೂ ಹೇಳಿದ್ದಾರೆ.

ಕಳೆದ 10 ರಿಂದ 15 ವರ್ಷಗಳ ಯಂತ್ರ-ಓದಬಲ್ಲ ದತ್ತಾಂಶ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಚುನಾವಣಾ ಆಯೋಗವು ನಮಗೆ ನೀಡದಿದ್ದರೆ, ಅವರು ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ಗಾಂಧಿ ಹೇಳಿದರು.

ರಾಜಕೀಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="112351"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!